ಹೊನ್ನಾವರ: 2023ರ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು ಕಾಂಗ್ರೆಸ್ ಪಕ್ಷ ಘೊಷಿಸಿರುವ 200 ಯುನಿಟ್ ಉಚಿತ ವಿದ್ಯುತ್ ಹಾಗೂ ಪ್ರತಿ ತಿಂಗಳು ಮನೆಯ ಯಜಮಾನಿಯ ಖಾತೆಗೆ 2000 ರೂಪಾಯಿ ನೀಡುವ ಯೋಜನೆಯ ಗ್ಯಾರಂಟಿ ಕಾರ್ಡ್ಗಳನ್ನು ಭಟ್ಕಳ ವಿಧಾನಸಭಾ ವ್ಯಾಪ್ತಿಯ ಪ್ರತಿ ಮನೆಗೆ ತಲುಪಿಸುವ ಕಾರ್ಯಕ್ಕೆ ಮಾಜಿ ಶಾಸಕ ಮಂಕಾಳ ವೈದ್ಯ ತಾಲೂಕಿನ ಮಾಗೋಡದಲ್ಲಿ ಚಾಲನೆ ನೀಡಿದರು.
ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಮತ್ತು ವಿಧಾನಸಭಾ ವಿರೋಧ ಪಕ್ಷ ನಾಯಕರಾದ ಸಿದ್ದರಾಮಯ್ಯ ಅವರು ಸಹಿ ಮಾಡಿರುವ ಈ ಮೊದಲೇ ಘೋಷಿಸಿದಂತೆ ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಜನಸಾಮಾನ್ಯರಿಗೆ ಕೊಡುವ ಯೋಜನೆಗಳ ಅನುಷ್ಠಾನದ ಬಗ್ಗೆ ಗ್ಯಾರಂಟಿ ಕಾರ್ಡ್ಗಳನ್ನು ಮಾಡಿ ರಾಜ್ಯದ ಪ್ರತಿ ಮನೆ ಮನೆಗೂ ತಲುಪಿಸುವ ಕೆಲಸವಾಗುತ್ತಿದ್ದು ಶುಕ್ರವಾರ ಮಾಗೋಡ ಭಾಗದಲ್ಲಿ ನಡೆದ ಜನಜಾಗೃತಿ ಸಭೆಯಲ್ಲಿ ಕಾರ್ಡ್ ಗಳನ್ನು ವಿತರಿಸುವುದಕ್ಕೆ ಚಾಲನೆ ನೀಡಿದ್ದಾರೆ. ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಭಟ್ಕಳ ಕ್ಷೇತ್ರದ ಮಾಜಿ ಶಾಸಕ ಮಂಕಾಳ ವೈದ್ಯ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿ ಬೂತ್ ಮಟ್ಟದಲ್ಲಿ ಸಭೆ ನಡೆಸುತ್ತಿದ್ದು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಜನಸಾಮಾನ್ಯರಿಗೆ ಸಿಗುವ ಸವಲತ್ತುಗಳ ಬಗ್ಗೆ ಮನವರಿಕೆ ಮಾಡಿಕೊಡುವ ಕೆಲಸ ಮಾಡುತ್ತಿದ್ದಾರೆ.
ಈ ಸಂದರ್ಭದಲ್ಲಿ ಮಂಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋವಿಂದ ನಾಯ್ಕ, ಮಾಜಿ ಬ್ಲಾಕ್ ಅಧ್ಯಕ್ಷ ಚಂದ್ರಶೇಖರ ಗೌಡ, ಜಿಲ್ಲಾಪಂಚಾಯತ ಮಾಜಿ ಸದಸ್ಯ ಕೃಷ್ಣ ಗೌಡ, ಪುಷ್ಪಾ ನಾಯ್ಕ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಉಷಾ ನಾಯ್ಕ, ಅಣ್ಣಯ್ಯ ನಾಯ್ಕ, ಯೋಗೇಶ್ ರಾಯ್ಕರ್, ಗೋವಿಂದ ನಾಯ್ಕ, ಐ.ವಿ.ನಾಯ್ಕ ಮುಂತಾದವರು ಹಾಜರಿದ್ದರು.