ಸಿದ್ದಾಪುರ : ಮೊಬೈಲ ಮತ್ತು ಟಿವಿ ಮಾಧ್ಯಮದ ಪ್ರಭಾವದಿಂದ ಕ್ರೀಡೆಗಳು ನಶಿಸಿ ಹೋಗುತ್ತಿರುವ ಕಾಲಘಟ್ಟದಲ್ಲಿ ಹಾರ್ಸಿಕಟ್ಟಾ ಮಾದ್ಲಮನೆ ಗೆಳೆಯರ ಬಳಗ ಹಾಗೂ ಊರ ನಾಗರಿಕರು ಪಂದ್ಯಾವಳಿಯನ್ನು ಆಯೋಜಿಸಿ ಅಭಿವೃದ್ಧಿ ಮತ್ತು ಸಂಬಂಧದ ಬೆಸುಗೆಗೆ ಮುನ್ನುಡಿ ಬರೆಯುತ್ತಿರುವದು ಮಾದರಿಯಾಗಿದೆ ಎಂದು ಶಿರಸಿ ಸಿದ್ದಾಪುರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಉಪೇಂದ್ರ ಪೈ ಹೇಳಿದರು.
ಅವರು ತಾಲೂಕಿನ ಮಾದ್ಲಮನೆಯ ಗೆಳೆಯರ ಬಳಗ ವತಿಯಿಂದ ಆಯೋಜಿಸಲಾದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ ಉದ್ಘಾಟಿಸಿ ನಂತರ ಮಾತನಾಡಿದ ಅವರು ಗ್ರಾಮೀಣ ಮಕ್ಕಳಲ್ಲಿ ಕ್ರೀಡಾಶಕ್ತಿ ಹೆಚ್ಚಿದೆ. ಆದರೆ ಪ್ರೋತ್ಸಾಹದ ಕೊರತೆಯಿಂದ ಎಲೆ ಮರೆಯ ಕಾಯಿಯಂತೆ ಉಳಿಯುತ್ತಾರೆ. ಯುವಕರಿಗೆ ಹೆಚ್ಚು ಪ್ರೋತ್ಸಾಹ ಸಿಕ್ಕರೆ ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಗೆದ್ದು, ದೇಶದ ಕೀರ್ತಿ ಪತಾಕೆ ಹಾರಿಸುತ್ತಾರೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಯುವಶಕ್ತಿಯನ್ನು ಪೋತ್ಸಾಹಿಸಿ ಬೆಳೆಸಬೇಕಿದೆ. ಆಟದಲ್ಲಿ ಸೋಲು, ಗೆಲುವು ಮುಖ್ಯವಲ್ಲ. ಸ್ಪರ್ಧಾ ಮನೋಭಾವ ಬೆಳೆಸಿಕೊಂಡು ಭಾಗವಹಿಸುವುದೇ ಮುಖ್ಯ. ಸೋಲು ಗೆಲುವಿನ ಮೊದಲ ಮೆಟ್ಟಿಲು ಎಂಬುದನ್ನು ಅರಿತು ಆಟಗಳಲ್ಲಿ ಭಾಗವಹಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕ್ರೀಡಾಪಟುಗಳಿಗೆ ಕಿವಿ ಮಾತು ಹೇಳಿದರು.
ಈ ಸಂದರ್ಭದಲ್ಲಿ ಹಾರ್ಸಿಕಟ್ಟಾ ಗ್ರಾ. ಪಂಚಾಯತ್ ಅಧ್ಯಕ್ಷರು, ಸದಸ್ಯರು, ವೆಂಕಟೇಶ್ ಗೌಡ, ಕೆ.ಟಿ. ನಾಯ್ಕ, ಅಶೋಕ್ ಹೆಗಡೆ, ಆದರ್ಶ ನಾಯ್ಕ, ಊರಿನ ಹಿರಿಯರು ಹಾಗೂ ಅಪಾರ ಸಂಖ್ಯೆಯಲ್ಲಿ ಕ್ರೀಡಾ ಪ್ರೇಕ್ಷಕರು ಉಪಸ್ಥಿತರಿದ್ದರು.