ಬೆಂಗಳೂರು: ಈ ಬಾರಿಯೂ ಕಳೆದ ಸಾಲಿನಂತೆ ದ್ವಿತೀಯ ಪಿಯು ಪರೀಕ್ಷೆಗೆ ಸಮವಸ್ತ್ರ ನೀತಿ ಜಾರಿಯಾಗಿದ್ದು, ಹಿಜಾಬ್ ಧರಿಸಿ ಬಂದರೆ ದ್ವಿತೀಯ ಪಿಯು ಪರೀಕ್ಷೆಗೆ ಅವಕಾಶ ಇಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಮವಸ್ತ್ರ ನಿಯಮ ಪಾಲನೆ ಕಡ್ಡಾಯ. ಸಮವಸ್ತ್ರ ನಿಯಮ ಈಗಲೂ ಅನ್ವಯ. ಕಳೆದ ವರ್ಷದ ನಿಯಮವೇ ಈ ಬಾರಿಯೂ ಜಾರಿಯಲ್ಲಿರಲಿದೆ. ಆ ಮಕ್ಕಳು ಪರೀಕ್ಷೆಯಿಂದ ವಂಚಿತರಾಗುವುದು ಬೇಡ. ಕಳೆದ ವರ್ಷ 6 ವಿದ್ಯಾರ್ಥಿನಿಯರು ಹಿಜಾಬ್ ವಿವಾದದಿಂದ ಪರೀಕ್ಷೆ ಬರೆದಿಲ್ಲ. ಮಾಧ್ಯಮದ ಮೂಲಕ ಅವರಿಗೆ ಪರೀಕ್ಷೆ ಬರೆಯುವಂತೆ ಮನವಿ ಮಾಡಿಕೊಳ್ಳುತ್ತೇನೆ. ಸಮವಸ್ತ್ರದ ನಿಯಮ ಪಾಲಿಸಿ ಪರೀಕ್ಷೆಗೆ ಹಾಜರಾಗಿ ಎಂದು ಮನವಿ ಮಾಡಿದರು.