ಮುಂಡಗೋಡ: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಬುಧವಾರ ತಾಲೂಕು ಕ್ರೀಡಾಂಗಣದಲ್ಲಿ 19 ವರ್ಷದೊಳಗಿನ ಹೆಣ್ಣುಮಕ್ಕಳಿಗೆ ಕ್ರಿಕೆಟ್ ಪಂದ್ಯಾವಳಿ ನಡೆಸಿ ಸಂಭ್ರಮಿಸಲಾಯಿತು.
ಜಿಲ್ಲಾ ಪಂಚಾಯತ್, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ತಾಲೂಕು ಪಂಚಾಯತ್ ಸಹಯೋಗದಲ್ಲಿ ನಡೆದ ಕ್ರೀಡಾಕೂಟಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಅಕ್ಕಮಹಾದೇವಿ ಗಾಣಿಗೇರ ಚಾಲನೆ ನೀಡಿದರು. ಇಂತಹ ವಿಶೇಷ ಕ್ರೀಡಾಕೂಟ ಮಕ್ಕಳಿಗೆ ಸ್ಪೂರ್ತಿದಾಯಕವಾಗಿದೆ. ಸೋಲು ಗೆಲುವೆನ್ನದೆ ಸ್ನೇಹಮಯದಿಂದ ಭಾಗವಹಿಸಿ ಎಂದರು.
ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿಗಳಾದ ಪ್ರವೀಣ ಬಿ. ಕಟ್ಟಿ ಮಾತನಾಡಿ ಕೇಂದ್ರ ಸರ್ಕಾರದ ಆದೇಶದಂತೆ ತಾಲೂಕು ಮಟ್ಟದಲ್ಲಿ ಗ್ರಾಮೀಣ ಪ್ರದೇಶದ ಹೆಣ್ಣು ಮಕ್ಕಳಿಗಾಗಿ ಕ್ರೀಡೆ ಆಯೋಜನೆ ಮಾಡಿರುವುದು ಒಳ್ಳೆಯ ಕಾರ್ಯ ಮುಂದಿನ ದಿನಗಳಲ್ಲಿ ಹೆಣ್ಣು ಮಕ್ಕಳಿಗೆ ಪ್ರೋತ್ಸಾಹ ನೀಡುವಂತಹ ಕಾರ್ಯಕ್ರಮಗಳಾಗಬೇಕಿದೆ ಎಂದರು.
ಈ ಸಂದರ್ಭದಲ್ಲಿ ನರೇಗಾ ಸಹಾಯಕ ನಿರ್ದೇಶಕರಾದ ಟಿ.ವಾಯ್ ದಾಸನಕೊಪ್ಪ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕ್ರೀಡಾಧಿಕಾರಿ ಹನುಮಂತ ವಡ್ಡರ್ , ಐಇಸಿ ಸಂಯೋಜಕರು, ಎನ್‌ಆರ್‌ಎಲ್‌ಎಮ್ ಹಾಗೂ ಶಾಲಾ ಕಾಲೇಜು ದೈಹಿಕ ಶಿಕ್ಷಕರು ಭಾಗಿಯಾಗಿದ್ದರು
ಮಹಿಳಾ ದಿನಾಚರಣೆ ಪ್ರಯುಕ್ತ ಕ್ರಿಕೆಟ್ ಪಂದ್ಯಾವಳಿ ಯಶಸ್ವಿ
