ಶಿರಸಿ: ತಾಲೂಕಿನ ಹೆಗಡೇಕಟ್ಟಾದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿಯರಾಗಿ ಕಳೆದ 41 ವರ್ಷಗಳಿಂದ ಶ್ಲಾಘನೀಯ ಸೇವೆ ಸಲ್ಲಿಸಿದ ಶ್ರೀಮತಿ ಉಮಾಬಾಯಿ ವೆಂಕಟರಮಣ ಹೆಗಡೆ ವಯೋನಿವೃತ್ತಿ ಹೊಂದಿದ ಕಾರಣ ಸನ್ಮಾನ ಹಾಗೂ ಬೀಳ್ಕೊಡುಗೆ ಸಮಾರಂಭವನ್ನು ಏರ್ಪಡಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷ ದೇವರು ಹೆಗಡೆ ವಹಿಸಿಕೊಂಡಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಶಿವಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವೀಣಾ ಭಟ್ಟ ನೆರವೇರಿಸಿದರು. ವಿಶೇಷ ಉಪನ್ಯಾಸಕರಾಗಿ ಚೈತನ್ಯ ಕಾಲೇಜ್ ಉಪನ್ಯಾಸಕ ಅನಂತಮೂರ್ತಿ ಆಗಮಿಸಿದ್ದರು. ಶಿಕ್ಷಣ ಅಭಿಮಾನಿ ಎಂ.ಆರ್. ಹೆಗಡೆ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸುರೇಶ ಪಟಗಾರ್, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಕಾರ್ಯದರ್ಶಿ ಬಾಲಚಂದ್ರ ಪಟಗಾರ, ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಕಾರ್ಯದರ್ಶಿ ಉದಯ ಭಟ್ಟ, ಹೆಗಡೆಕಟ್ಟಾ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಗಳಾದ ಶ್ರೀ ವಿನಾಯಕ ಗೌಡ, ಉಮಾಬಾಯಿ ದಂಪತಿಗಳು ಅತಿಥಿಗಳಾಗಿದ್ದರು. ಈ ಸಭೆಯಲ್ಲಿ ಕಾರ್ಯಕ್ರಮದ ನಿರ್ವಹಣೆಯನ್ನು ಯಡಳ್ಳಿಯ ಮಂಜುನಾಥ ಹೆಗಡೆ ನೆರವೇರಿಸಿದರು. ಸ್ವಾಗತ ಕಾರ್ಯಕ್ರಮವನ್ನು ಶಾಲಾ ಮುಖ್ಯ ಶಿಕ್ಷಕ ಸತೀಶ್ ಹೆಗಡೆ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಉಮಾಬಾಯಿ ಹೆಗಡೆ ಕುಟುಂಬಸ್ಥರು, ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಪದಾಧಿಕಾರಿಗಳು, ಸದಸ್ಯರು, ಶಾಲಾ ಎಸ್‌ಡಿಎಂಸಿಯ ಸದಸ್ಯರು, ಊರ ನಾಗರಿಕರು, ಪಾಲಕ ಪೋಷಕರು, ಹಳೆಯ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಾಲಾ ವಿದ್ಯಾರ್ಥಿಗಳು, ಅಡುಗೆ ಸಿಬ್ಬಂದಿಯವರು ಹಾಜರಿದ್ದು ಕಾರ್ಯಕ್ರಮವನ್ನು ಚಂದಗಾಣಿಸಿಕೊಟ್ಟರು. ಈ ಸಂದರ್ಭದಲ್ಲಿ ಪ್ರಸಕ್ತ ಇಬ್ಬರು ವಿದ್ಯಾರ್ಥಿಗಳು, ಸಹೋದ್ಯೋಗಿ ಶಿಕ್ಷಕರು, ಪಾಲಕರು, ಹಳೆಯ ವಿದ್ಯಾರ್ಥಿಗಳು, ಸಭೆಯಲ್ಲಿ ಉಪಸ್ಥಿತರಿದ್ದ ಗಣ್ಯರು ಉಮಾಬಾಯಿ ಹೆಗಡೆಯವರ ಅಪ್ರತಿಮ ಸೇವೆಯನ್ನು ನೆನೆದು, ಪ್ರಶಂಸೆಯನ್ನು ವ್ಯಕ್ತಪಡಿಸಿದರು.