ಕಾರವಾರ: ದಾಂಡೇಲಿ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ ಹಾಗೂ ಟಾಟಾ ಮೋಟರ್ಸ್ ಇವರ ಜಂಟಿ ಸಹಯೋಗದಲ್ಲಿ 30 ದಿನಗಳ ಕಾಲ ಲಘು ವಾಹನ ಚಾಲನ ತರಬೇತಿಯನ್ನು ಹಮ್ಮಿಕೊಂಡಿದೆ.
ಆಸಕ್ತ 20ರಿಂದ 45 ವರ್ಷದೊಳಗಿನ ಯುವಕರು ತಮ್ಮ ಹೆಸರು, ವಿಳಾಸ, ದೂರವಾಣಿ ಸಂಖ್ಯೆ,ವಿರ್ದ್ಯಾರ್ಹತೆ, ಮುಂತಾದ ವಿವರಗಳೊಂದಿಗೆ ಏ.10 ರೊಳಗೆ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ವಿಸ್ತರಣಾ ಕೇಂದ್ರ, ದಾಂಡೇಲಿ ಪೋನ್ ಮೂಲಕ ವಿವರ ನೀಡಿ ತರಬೇತಿಗೆ ನೋಂದಾಯಿಸಿಕೊಳ್ಳಬಹುದು. ತರಬೇತಿಯು ಉಟೋಪಚಾರ ಮತ್ತು ವಸತಿಯೊಂದಿಗೆ ಉಚಿತವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: tel:+9108284298547, tel: +919632149217, tel: +919449782425 ಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಲಘು ವಾಹನ ಚಾಲನ ತರಬೇತಿಗೆ ಅರ್ಜಿ ಆಹ್ವಾನ
