• Slide
    Slide
    Slide
    previous arrow
    next arrow
  • ರಾಜ್ಯದಲ್ಲಿ 80ವರ್ಷ ಮೇಲ್ಪಟ್ಟವರಿಗೆ, ದಿವ್ಯಾಂಗರಿಗೆ ಮನೆಯಿಂದಲೇ ಮತದಾನದ ಅವಕಾಶ

    300x250 AD

    ಬೆಂಗಳೂರು: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ 80 ವರ್ಷಕ್ಕೂ ಮೇಲ್ಪಟ್ಟವರು ಹಾಗೂ ದಿವ್ಯಾಂಗರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶವನ್ನು ನೀಡಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.

    ಇಂದು ವಿಧಾನಸೌಧದಲ್ಲಿ ರಾಜ್ಯ ವಿಧಾನಸಭಾ ಚುನಾವಣೆಯ ಪೂರ್ವ ಸಿದ್ಧತೆ ಕುರಿತು ಮಾಹಿತಿ ನೀಡಿದ ಅವರು, ಕಳೆದ ಮೂರು ದಿನಗಳಿಂದ ರಾಜಕೀಯ ಪಕ್ಷಗಳು, ಸರ್ಕಾರದ ಮುಖ್ಯ ಕಾರ್ಯದರ್ಶಿ, ಪೊಲೀಸ್ ಮಹಾನಿರ್ದೇಶಕರು, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. ಚುನಾವಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದರು.

    ರಾಜ್ಯದಲ್ಲಿ ಎಲ್ಲಾ 80 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು ದಿವ್ಯಾಂಗರು ಬಯಸಿದರೆ ಅವರಿಗೆ ಮನೆಯಿಂದಲೂ ಮತದಾನ ಮಾಡುವ ಸೌಲಭ್ಯ ಒದಗಿಸಲಿದ್ದೇವೆ ಎಂದಿದ್ದಾರೆ.ಮೇ 24ಕ್ಕೆ ಸರ್ಕಾರದ ಅವಧಿ ಅಂತ್ಯವಾಗಲಿದ್ದು, ಅದಕ್ಕೂ ಮುಂಚಿತವಾಗಿ ಚುನಾವಣೆ ನಡೆಯಲಿದೆ.

    300x250 AD

    Share This
    300x250 AD
    300x250 AD
    300x250 AD
    Leaderboard Ad
    Back to top