ಶಿರಸಿ: ಅನುಭವೀ ಪತ್ರಕರ್ತ,ಶಶಿಧರ ಹೆಗಡೆ ನಂದಿಕಲ್ ಅವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ 2021ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಶಿಧರ ಹೆಗಡೆ ನಂದಿಕಲ್ ಅವರಿಗೆ ಪ್ರಶಸ್ತಿ ನೀಡಿ ಅಭಿನಂದಿಸಿದರು. ನಂದಿಕಲ್ ಅವರು ‘ವಿಜಯ ಕರ್ನಾಟಕ’ ಪತ್ರಿಕೆಯ ಸಹಾಯಕ ಸಂಪಾದಕ ಹಾಗೂ ಪೊಲಿಟಿಕಲ್ ಬ್ಯೂರೋ ಮುಖ್ಯಸ್ಥರಾಗಿ ಕೆಲಸ ಮಾಡುತ್ತಿದ್ದಾರೆ.
ಹಾಗೆಯೇ ಜಿಲ್ಲೆಯ ಇನ್ನೋರ್ವ ಪತ್ರಕರ್ತ ಟಿ.ಬಿ.ಹರಿಕಾಂತ ಅವರಿಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಶಶಿಧರ ಹೆಗಡೆ ನಂದಿಕಲ್’ಗೆ ಮಾಧ್ಯಮ ಅಕಾಡೆಮಿ ವಾರ್ಷಿಕ ಪ್ರಶಸ್ತಿ ಪ್ರದಾನ
