ಜಮ್ಮು ಕಾಶ್ಮೀರ:ಭಯೋತ್ಪಾದನೆಗೆ ಧನಸಹಾಯ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಕಾಶ್ಮೀರದ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದೆ.
ಅನಂತ್ನಾಗ್, ಪುಲ್ವಾಮಾ ಮತ್ತು ಶೋಪಿಯಾನ್ ಜಿಲ್ಲೆಗಳಲ್ಲಿ ಎನ್ಐಎ ದಾಳಿ ನಡೆಸಿದೆ. ಪೊಲೀಸರು ಹಾಗೂ ಸಿಆರ್ಪಿಎಫ್ ಸಿಬ್ಬಂದಿಗಳ ಜತೆ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಮುಂಜಾನೆ ಕೆಲವು ವಸತಿ ಗೃಹಗಳ ಮೇಲೆ ದಾಳಿ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.