• Slide
    Slide
    Slide
    previous arrow
    next arrow
  • ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ನಿಧನ: ಕಾಂಗ್ರೆಸ್‌ನಿಂದ ಶ್ರದ್ಧಾಂಜಲಿ ಸಲ್ಲಿಕೆ

    300x250 AD

    ದಾಂಡೇಲಿ: ಮಾಜಿ ಸಂಸದರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಅವರ ನಿಧನಕ್ಕೆ ದಾಂಡೇಲಿ ಬ್ಲಾಕ್ ಕಾಂಗ್ರೆಸ್ ಸಮಿತಿಯು ಸಂತಾಪ ಸೂಚಿಸಿ, ನಗರದ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಶ್ರದ್ಧಾಂಜಲಿ ಸಲ್ಲಿಸಿತು.

    ಅಗಲಿದ ಧ್ರುವನಾರಾಯಣ ಅವರ ಭಾವಚಿತ್ರಕ್ಕೆ ಪುಷ್ಪನಮನವನ್ನು ಸಲ್ಲಿಸಿ, ಮೌನಪ್ರಾರ್ಥನೆ ಸಲ್ಲಿಸಲಾಯಿತು. ಆ ಬಳಿಕ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಆರ್.ಹೆಗಡೆ, ಧ್ರುವನಾರಾಯಣ ಅವರು ಅಜಾತಶತ್ರುವಾಗಿದ್ದವರು. ವಿದ್ಯಾರ್ಥಿ ದೆಸೆಯಲ್ಲೆ ಕಾಂಗ್ರೆಸ್ ಪಕ್ಷದ ಮೂಲಕ ಗುರುತಿಸಿಕೊಂಡು ಪಕ್ಷದ ಮುಂಚೂಣಿ ನಾಯಕನಾಗಿ ಬೆಳೆದವರು. ಸರಳತೆಯನ್ನು ಮೈಗೂಡಿಸಿಕೊಂಡು ಕಾಂಗ್ರೆಸ್ ಪಕ್ಷದ ತತ್ವಸಿದ್ಧಾಂತದAತೆ ಎಲ್ಲರನ್ನು ಸರ್ವ ಸಮನ್ವಯತೆಯಿಂದ ನೋಡಿಕೊಳ್ಳುತ್ತಿದ್ದ ಅವರ ವ್ಯಕ್ತಿತ್ವ ಯಾವತ್ತು ಸ್ಮರಣೀಯ. ದ್ರುವನಾರಾಯಣ ಅವರ ಅಕಾಲಿಕ ನಿಧನ ನಾಡಿಗೆ ಮತ್ತು ಪಕ್ಷಕ್ಕೆ ತುಂಬಲಾರದ ನಷ್ಟ ಎಂದು ಅವರ ಆತ್ಮಕ್ಕೆ ಚಿರಶಾಂತಿ ಕೋರಿದರು.
    ಈ ಸಂದರ್ಭದಲ್ಲಿ ಪಕ್ಷದ ಉಪಾಧ್ಯಕ್ಷ ಕರೀಂ ಅಜ್ರೇಕರ್, ಪಕ್ಷದ ಪ್ರಧಾನ ಕಾರ್ಯದರ್ಶಿ ಇಕ್ಬಾಲ್ ಶೇಖ್, ಎಸ್.ಎಸ್.ಪೂಜಾರ್, ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ರೇಣುಕಾ ಬಂದA, ನಗರ ಸಭಾ ಸದಸ್ಯರಾದ ಮೋಹನ ಹಲವಾಯಿ ಸೇರಿದಂತೆ ಪಕ್ಷದ ಮುಖಂಡರು, ಪಕ್ಷದ ನಗರಸಭಾ ಸದಸ್ಯರು, ಪಕ್ಷದ ಕರ‍್ಯಕರ್ತರು ಉಪಸ್ಥಿತರಿದ್ದರು.
    ***

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top