ಕಾಬೂಲ್: ಅಫ್ಘಾನಿಸ್ತಾನದಲ್ಲಿ ನಡೆಯುತ್ತಿರುವ ತಾಲೀಬಾನ್ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಕಾಬುಲ್‍ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಸಿಬ್ಬಂದಿಗಳನ್ನು ಭಾರತಕ್ಕೆ ಕರೆಸಿಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.
ಅಫ್ಘಾನಿಸ್ತಾನದ ಬೆಳವಣಿಗೆಗಳನ್ನು ಗಮನಿಸುತ್ತಿರುವ ಭಾರತ ಸರ್ಕಾರ ಕಾಬೂಲ್‍ನ ರಾಯಭಾರಿ ಕಚೇರಿ ಸಿಬ್ಬಂದಿಗಳ ಸುರಕ್ಷಿತ ಸ್ಥಳಾಂತರ ಮತ್ತು ದೇಶದಲ್ಲಿ ಸಿಲುಕಿರುವ ನಾಗರಿಕರ ಬಗ್ಗೆ, ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಅವಲೋಕನಾ ವರದಿ ಸಿದ್ಧಪಡಿಸಿದೆ.
ಈಗಾಗಲೇ ಏರ್‍ಇಂಡಿಯಾ ವಿಮಾನದ ಮೂಲಕ ಭಾರತೀಯರನ್ನು ರಕ್ಷಣೆ ಮಾಡುವ ಕಾರ್ಯವೂ ನಡೆಯುತ್ತಿದ್ದು, ಮೊದಲ ಹಂತದಲ್ಲಿ 129 ಜನರು ಭಾರತಕ್ಕೆ ಮರಳಿದ್ದಾರೆ. ಹಾಗೆಯೇ ಭಾರತೀಯ ವಾಯುಪಡೆಯ ಸಿ-17 ಗ್ಲೋಬ್ ಮಾಸ್ಟರ್ ಮಿಲಿಟರಿ ಟ್ರಾನ್ಸ್‍ಪೆÇೀರ್ಟ್ ವಿಮಾನಗಳನ್ನು ಕಾರ್ಯಾಚರಣೆಗೆ ಬಳಕೆ ಮಾಡಲು ಸನ್ನದ್ಧವಾಗಿರಿಸಿಕೊಂಡಿದೆ.
ನ್ಯೂಸ್ 13