ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ 242 ಲೆಕ್ಕ ಸಹಾಯಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಬಿ.ಕಾಂ, ಬಿಬಿಎ, ಬಿಬಿಎಂ ವಿದ್ಯಾರ್ಹತೆ ಮತ್ತು ಏಪ್ರಿಲ್ 23,2023ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಲೆಕ್ಕ ಸಹಾಯಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 27,650/- ರಿಂದ 52,650/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಸಾಮಾನ್ಯ ಅರ್ಜಿದಾರರು 600/-ರೂ ಮತ್ತು 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು 600/-ರೂ ಮತ್ತು ಮಾಹಿ ಸೈನಿಕ ಅಭ್ಯರ್ಥಿಗಳು 50/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಏಪ್ರಿಲ್ 23,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.