• Slide
  Slide
  Slide
  previous arrow
  next arrow
 • ಗ್ರಂಥಾಲಯದಲ್ಲಿ ಡಿಜಿಟಲೀಕರಣಕ್ಕೆ ಹೆಚ್ಚು ಆದ್ಯತೆ; 1ಕೋಟಿಗೂ ಹೆಚ್ಚು ನೋಂದಣಿ

  300x250 AD


  ಬೆಂಗಳೂರು: ರಾಜ್ಯದ ಸಾರ್ವಜನಿಕ ಗ್ರಂಥಾಲಯ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ಕರ್ನಾಟಕ ಡಿಜಿಟಲ್ ಸಾರ್ವಜನಿಕ ಗ್ರಂಥಾಲಯದಲ್ಲಿ ನೋಂದಾಯಿಸಿಕೊಂಡವರ ಸಂಖ್ಯೆ 1 ಕೋಟಿ ದಾಟಿದೆ.

  ರಾಜ್ಯದಲ್ಲಿ ಸಮಗ್ರ ಸಾರ್ವಜನಿಕ ಗ್ರಂಥಾಲಯ ವ್ಯವಸ್ಥೆಯನ್ನು, ಕರ್ನಾಟಕ ಸಾರ್ವಜನಿಕ ಗ್ರಂಥಾಲಯ ಕಾಯ್ದೆ 1965 ರನ್ವಯ ಕಾರ್ಯಾರಂಭಕ್ಕೆ ತರಲಾಗಿದೆ. ಕೊರೋನಾ ಬಳಿಕ ಈ ಗ್ರಂಥಾಲಯಗಳಲ್ಲಿ ಡಿಜಿಟಲೀಕರಣಕ್ಕೆ ಹೆಚ್ಚು ಆದ್ಯತೆ ನೀಡಲಾಗಿತ್ತು. ಆ ಬಳಿಕ ಗ್ರಂಥಾಲಯದಲ್ಲಿ ನೋಂದಣಿಯಾಗುವವರ ಸಂಖ್ಯೆ, ಓದುಗರ ಸಂಖ್ಯೆ ಏರಿಕೆಯಾಗಿರುವುದಾಗಿ ಇಲಾಖೆ ತಿಳಿಸಿದೆ.

  300x250 AD

  ಈ ಡಿಜಿಟಲ್ ಗ್ರಂಥಾಲಯ ಸೌಲಭ್ಯವನ್ನು ರಾಜ್ಯದ 26 ನಗರ ಕೇಂದ್ರ ಗ್ರಂಥಾಲಯಗಳು, 30 ಜಿಲ್ಲಾ ಕೇಂದ್ರ ಗ್ರಂಥಾಲಯಗಳು, 216 ತಾಲೂಕು ಗ್ರಂಥಾಲಯಗಳು, ಸೇರಿದಂತೆ ಒಟ್ಟು 272 ಸಾರ್ವಜನಿಕ ಗ್ರಂಥಾಲಯಗಳಲ್ಲಿ ಜಾರಿಗೆ ತರಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳ ಸರ್ಕಾರಿ ಶಾಲೆ ,ಪದವಿಪೂರ್ವ ಕಾಲೇಜುಗಳ 10 ಲಕ್ಷ ವಿದ್ಯಾರ್ಥಿಗಳಿಗೆ ಮೊಬೈಲ್ ಆಪ್ ಮೂಲಕ ಕಲಿಕಾ ವಿಷಯಗಳನ್ನು ಒದಗಿಸಲಾಗುತ್ತಿದೆ ಎಂಬುದಾಗಿಯೂ ಇಲಾಖೆ ಹೇಳಿದೆ.
  ನ್ಯೂಸ್ 13

  Share This
  300x250 AD
  300x250 AD
  300x250 AD
  Leaderboard Ad
  Back to top