• Slide
    Slide
    Slide
    previous arrow
    next arrow
  • ಅಪಘಾತಪಡಿಸಿ ವ್ಯಕ್ತಿಯ ಸಾವಿಗೆ ಕಾರಣನಾಗಿದ್ದ ಲಾರಿ ಚಾಲಕನಿಗೆ ಶಿಕ್ಷೆ

    300x250 AD

    ಯಲ್ಲಾಪುರ: ಅರಬೈಲ್ ಘಟ್ಟದಲ್ಲಿ ನಡೆದ ಲಾರಿ ಹಾಗೂ ಬಸ್ ನಡುವಿನ ಅಪಘಾತದಲ್ಲಿ ಲಾರಿ ಚಾಲಕನಿಗೆ ಶಿಕ್ಷೆ ವಿಧಿಸಿ ಇಲ್ಲಿನ ನ್ಯಾಯಾಲಯ ವಿಧಿಸಿದ್ದ ಆದೇಶವನ್ನು ಜಿಲ್ಲಾ ನ್ಯಾಯಾಲಯ ಎತ್ತಿ ಹಿಡಿದಿದೆ.

    2017ರ ಮಾ.2ರಂದು ರಮ್ಜಾನ್ ಸಾಬ್ ಎಂಬಾತ ಕೆಎಸ್‌ಆರ್‌ಟಿಸಿ ಬಸ್‌ಗೆ ತಾನು ಚಲಾಯಿಸುತ್ತಿದ್ದ ಲಾರಿಯನ್ನು ಗುದ್ದಿದ್ದರಿಂದ ಬಸ್ ಪ್ರಯಾಣಿಕ ಸದಾಶಿವ ಖೋತ ಎಂಬಾತರು ಸಾವನಪ್ಪಿದ್ದರು. ಜೊತೆಗೆ ಬಸ್ಸಿನಲ್ಲಿದ್ದ ಇತರೆ ಪ್ರಯಾಣಿಕರು ಗಾಯಗೊಂಡಿದ್ದರು. ಪ್ರಕರಣದ ತನಿಖೆ ನಡೆಸಿದ ನ್ಯಾಯಾಲಯ ಲಾರಿ ಚಾಲಕನಿಗೆ 1 ವರ್ಷ ಜೈಲು ಶಿಕ್ಷೆ ವಿಧಿಸಿದ್ದು, ಇದನ್ನು ಪ್ರಶ್ನಿಸಿ ಆತ ಮೇಲ್ಮನವಿ ಸಲ್ಲಿಸಿದ್ದ. ಪ್ರಕರಣದ ವಾದ ಆಲಿಸಿದ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ವಿ.ಜಗದೀಶ್ ಅವರು ಕೆಳ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿದಿದ್ದಾರೆ.
    ಸರ್ಕಾರದ ಪರವಾಗಿ ರಾಜೇಶ ಮಳಗಿಕರ್ ಹಾಗೂ ಝೀನತ್‌ಭಾನು ಇಬ್ರಾಹಿಂಸಾಬ್ ಶೇಖ್ ಅವರು ವಾದ ಮಂಡಿಸಿದ್ದರು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top