ಕುಮಟಾ: ಮುಂಬರುವ ವಿಧಾನಸಭೆ ಚುನಾವಣೆಗಳು ಹಾಗೂ ಪಕ್ಷ ಸಂಘಟನೆ ಹಿನ್ನಲೆಯಲ್ಲಿ ಉತ್ತರಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕುಮಟಾ ವಿಧಾನಸಭಾ ಕ್ಷೇತ್ರಕ್ಕೆ ಕೆಪಿಸಿಸಿ ಸಂಯೋಜಕರಾಗಿ ನಾಗರಾಜ ಎಂ. ಮಡಿವಾಳರನ್ನು ನಿಯೋಜಿಸಿ ಆದೇಶ ಹೊರಡಿಸಲಾಗಿದೆ.
ಕಳೆದೊಂದು ದಶಕಕ್ಕೂ ಅಧಿಕ ಕಾಲದಿಂದ ಪಕ್ಷ ಸಂಘಟನೆಯಲ್ಲಿ ತೊಡಗಿರುವ ನಾಗರಾಜ ಮಡಿವಾಳ, ಮಾಜಿ ಯೂಥ್ ಕಾಂಗ್ರೆಸ್ ಅಧ್ಯಕ್ಷರಾಗಿಯೂ ಜವಾಬ್ದಾರಿ ನಿರ್ವಹಿಸಿದ್ದಾರೆ. ಪ್ರಸ್ತುತ ಕುಮಟಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪಕ್ಷ ಸಂಘಟನಾ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹಮ್ಮದ್(MLC) ಆದೇಶ ನೀಡಿದ್ದಾರೆ.