ಬೆಂಗಳೂರು: ಕಾಂತಾರ ಸಿನಿಮಾದ ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ ಅವರು ವಿಶ್ವಸಂಸ್ಥೆಯಲ್ಲಿ ಕಾಡಿನ ಜನರು ಮತ್ತು ಸಂಸ್ಕೃತಿಯ ಬಗ್ಗೆ ಮಾತನಾಡಲು ಸಜ್ಜಾಗಿದ್ದಾರೆ.
ನಾಡಿನ ಸಂಸ್ಕೃತಿ, ಆಚರಣೆ, ಆಚಾರ- ವಿಚಾರವನ್ನು ಸಿನಿಮಾ ಮೂಲಕ ತೋರಿಸುತ್ತಿರುವ ರಿಷಬ್ ಶೆಟ್ಟಿ ಇದೀಗ ಇದೀಗ ಕಾಡಿನ ಸಂಸ್ಕೃತಿ ಬಗ್ಗೆ ಮಾತನಾಡಲು ವಿಶ್ವಸಂಸ್ಥೆಗೆ ಹೊರಟು ನಿಂತಿರುವುದು ಕರ್ನಾಟಕಕ್ಕೆ ಹೆಮ್ಮೆಯ ಸಂಗತಿಯಾಗಿದೆ.
ಜಾಗತಿಕ ಸಮಸ್ಯೆಗಳನ್ನು ವಿಶ್ವಸಂಸ್ಥೆ ತನ್ನ ವಾರ್ಷಿಕ ಸಭೆಯಲ್ಲಿ ಚರ್ಚಿಸುತ್ತಿದೆ. ವಿಶ್ವದ ಹತ್ತು ಹಲವು ದೇಶಗಳ ನಾಯಕರು ಈ ಸಭೆಯಲ್ಲಿ ಪಾಲ್ಗೊಳ್ಳುತ್ತಾರೆ. ಸಮಸ್ಯೆಗಳ ಬಗ್ಗೆ ಅಲ್ಲಿ ಬೆಳಕು ಚೆಲ್ಲಲಾಗುತ್ತದೆ. ಅದರಂತೆ ಕರ್ನಾಟಕದಿಂದ ಕಾಂತಾರ ಚಿತ್ರದ ನಿರ್ದೇಶಕ ಮತ್ತು ನಟ ರಿಷಬ್ ಶೆಟ್ಟಿ ಸಹ ಈ ವಾರ್ಷಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ.
‘ಕಾಂತಾರ’ ಸಿನಿಮಾದಲ್ಲಿ ಕಾಡಿನ ಜನರ ಮತ್ತು ಸಂಸ್ಕೃತಿಯ ಬಗ್ಗೆ ಬೆಳಕು ಚೆಲ್ಲಿದ್ದರು. ಈ ಚಿತ್ರಕ್ಕೆ ವ್ಯಾಪಕ ಮೆಚ್ಚುಗೆ ಗಳಿಸಿತ್ತು. ಇದೀಗ ಅದರ ಮುಂದುವರಿದ ಭಾಗವಾಗಿ, ಕಾಡಂಚಿನ ಜನರ ಸಮಸ್ಯೆಗಳ ಬಗ್ಗೆ ವಿಶ್ವಸಂಸ್ಥೆಯಲ್ಲಿ ಮಾತನಾಡಲಿದ್ದಾರೆ. ವಿಶೇಷ ಏನೆಂದರೆ ವಿಶ್ವಸಂಸ್ಥೆಯಲ್ಲಿ ಕನ್ನಡದಲ್ಲಿಯೇ ಸಮಸ್ಯೆಯ ಅರಿವು ಮೂಡಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರಿಷಬ್ ಶೆಟ್ಟಿ ಅವರ ಬಗ್ಗೆ ಟ್ವಿಟ್ ಮಾಡಿರುವ ಕರ್ನಾಟಕ ಬಿಜೆಪಿ, “ಕನ್ನಡಿಗರಿಗಿಂದು ಸಂಭ್ರಮದ ದಿನ. ಪ್ರತಿಷ್ಠಿತ ವಿಶ್ವಸಂಸ್ಥೆಯಲ್ಲಿಕರ್ನಾಟಕದ ಸುಪುತ್ರ ರಿಷಬ್ ಶೆಟ್ಟಿ ಭಾರತವನ್ನು ಪ್ರತಿನಿಧಿಸಿ ಕನ್ನಡದಲ್ಲೇ ಮಾತಾಡುತ್ತಾರೆ ಎಂಬುದು ಕನ್ನಡ ನಾಡಿಗೆ ಹೆಮ್ಮೆ ತಂದಿದೆ. ಕನ್ನಡ, ಕನ್ನಡಿಗರನ್ನು ನರೇಂದ್ರ ಮೋದಿ ಅವರ ಸರ್ಕಾರವು ಗುರುತಿಸುವ, ಗೌರವಿಸುವ ಯಾವ ಅವಕಾಶವನ್ನೂ ಬಿಟ್ಟಿಲ್ಲ” ಎಂದಿದೆ
ಕಾಂತಾರ’ ಸಿನಿಮಾದಲ್ಲಿ ಕಾಡಿನ ಜನರ ಮತ್ತು ಸಂಸ್ಕೃತಿಯ ಬಗ್ಗೆ ಬೆಳಕು ಚೆಲ್ಲಿದ್ದರು. ಈ ಚಿತ್ರಕ್ಕೆ ವ್ಯಾಪಕ ಮೆಚ್ಚುಗೆ ಗಳಿಸಿತ್ತು. ಇದೀಗ ಅದರ ಮುಂದುವರಿದ ಭಾಗವಾಗಿ, ಕಾಡಂಚಿನ ಜನರ ಸಮಸ್ಯೆಗಳ ಬಗ್ಗೆ ವಿಶ್ವಸಂಸ್ಥೆಯಲ್ಲಿ ಮಾತನಾಡಲಿದ್ದಾರೆ. ವಿಶೇಷ ಏನೆಂದರೆ ವಿಶ್ವಸಂಸ್ಥೆಯಲ್ಲಿ ಕನ್ನಡದಲ್ಲಿಯೇ ಸಮಸ್ಯೆಯ ಅರಿವು ಮೂಡಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.