ನವದೆಹಲಿ: ಅಫ್ಘನಿಸ್ಥಾನದಿಂದ ಮರಳುವ ಭಾರತೀಯ ಪ್ರಜೆಗಳ ಸುರಕ್ಷತೆ, ಸ್ಥಳಾಂತರಕ್ಕೆ ಕೇಂದ್ರ ಸರ್ಕಾರ ಎಲ್ಲಾ ರೀತಿಯ ಅನುಕೂಲ ಒದಗಿಸಲಿದೆ ಎಂದು ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
ಅಫ್ಘನಿಸ್ಥಾನದಲ್ಲಿರುವ ಸಿಖ್, ಹಿಂದೂ ಸಮುದಾಯಗಳ ಪ್ರತಿನಿಧಿಗಳ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದೇವೆ. ಹಾಗೆಯೇ ಆ ದೇಶವನ್ನು ತೊರೆಯಲು ಬಯಸುವವರಿಗೆ ಬೇಕಾದ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಮಾಡಿಕೊಡುವುದಾಗಿ ಸಚಿವಾಲಯ ಹೇಳಿದೆ.
ಅಲ್ಲಿಂದ ಸ್ವದೇಶಕ್ಕೆ ಮರಳಲು ಬಯಸುವ ಭಾರತದ ಪ್ರಜೆಗಳಿದ್ದಾರೆ. ಅವರೊಂದಿಗೆ ಸರ್ಕಾರ ಸಂಪರ್ಕ ಸಾಧಿಸಿದೆ. ಕಾಬೂಲ್ ವಿಮಾನ ನಿಲ್ದಾಣದಲ್ಲಿ ಸಾವಿರಾರು ಜನರು ದೇಶ ತೊರೆಯಲು ಸೇರಿದ್ದ ಹಿನ್ನೆಲೆಯಲ್ಲಿ ಗೊಂದಲಗಳಾಗಿತ್ತು. ಈ ಹಿನ್ನೆಲೆಯಲ್ಲಿ ಏರ್ ಇಂಡಿಯಾ ವಿಮಾನ ಸಹ ತನ್ನ ಸೇವೆ ರದ್ದುಗೊಳಿಸುವಂತಾಗಿತ್ತು ಎಂದು ಸಚಿವಾಲಯ ಹೇಳಿದೆ.