ಶಿರಸಿ: ಅಖಿಲ ಭಾರತ ಹಿಂದೂ ಮಹಾಸಭಾ ಶಿರಸಿ ಹಮ್ಮಿಕೊಂಡಿರುವ ಸದಸ್ಯತ್ವ ಅಭಿಯಾನದ ನಿಮಿತ್ತ ಯುಗಾದಿ ಹಬ್ಬದ ಶುಭ ಮುಹೂರ್ತದಲ್ಲಿ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತಿ ಮಹಾಸ್ವಾಮಿಗಳು ತಮ್ಮ ಅಮೃತ ಹಸ್ತಗಳಿಂದ ಸದಸ್ಯತ್ವ ಅಭಿಯಾನವನ್ನು ಉದ್ಘಾಟಿಸಿದರು.
ಪರಮ ಪೂಜ್ಯ ಶ್ರೀಗಳು ಪ್ರಥಮ ಸದಸ್ಯತ್ವವನ್ನು ಪಡೆಯುವ ಮೂಲಕ ಹಿಂದೂ ಮಹಾಸಭಾದ ಸದಸ್ಯತ್ವ ಅಭಿಯಾನಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಹಿಂದೂ ಮಹಾಸಭಾದ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.