Slide
Slide
Slide
previous arrow
next arrow

ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ, 25ಸಾವಿರ ರೂ. ದಂಡ

300x250 AD

ಹೊನ್ನಾವರ: ಜಮೀನು ಹಂಚಿಕೆ ಸಂಬಂಧ ವ್ಯಕ್ತಿಯೋರ್ವನನ್ನು ಕೊಲೆ ಮಾಡಿ, ಅವರ ಪತ್ನಿಗೂ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ್ದ ಆರೋಪಿಯೋರ್ವನಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 25 ಸಾವಿರ ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ.
ಹೊನ್ನಾವರದ ಉಮೇಶ ನಾಯ್ಕ ಶಿಕ್ಷೆಗೊಳಾದ ವ್ಯಕ್ತಿಯಾಗಿದ್ದಾನೆ. ಈತ ಹಾಗೂ ಮಹಾಬಲೇಶ್ವರ ನಾಯ್ಕ ಎಂಬುವವರ ನಡುವೆ ಜಮೀನು ವ್ಯಾಜ್ಯದಲ್ಲಿ ಉಮೇಶ ನಾಯ್ಕ ಮಹಾಬಲೇಶ್ವರನೊಂದಿಗೆ ಜಗಳ ತೆಗೆದು ಆತನಿಗೆ ಕತ್ತಿಯಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದ. ಈ ವೇಳೆ ಗಂಡನನ್ನು ಬಿಡಿಸಲು ಬಂದ ಮಹಾಬಲೇಶ್ವರ ಅವರ ಪತ್ನಿ ರಮಾ ನಾಯ್ಕ ಮೇಲೂ ಮಾರಣಾಂತಿಕ ಹಲ್ಲೆ ಮಾಡಿದ್ದ ಬಗ್ಗೆ ಮಂಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಡಿ.ಎಸ್.ವಿಜಯಕುಮಾರ್ ಅವರು ಆರೋಪ ಸಾಬಿತಾದ ಹಿನ್ನೆಲೆಯಲ್ಲಿ ಕಲಂ 302ರಡಿ ಜೀವಾವಧಿ ಶಿಕ್ಷೆ ಹಾಗೂ 25 ಸಾವಿರ ರೂ. ದಂಡ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ವಕೀಲರಾದ ರಾಜೇಶ್ ಮಳಗೀಕರ್ ವಾದಮಂಡಿಸಿದ್ದರು.

300x250 AD
Share This
300x250 AD
300x250 AD
300x250 AD
Back to top