ಯಲ್ಲಾಪುರ : ಮಾನ್ಯ ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಪಟ್ಟಣದ ಹೆಬ್ಬಾರ್ ನಗರದಲ್ಲಿ 40 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾದ ಜಿ+2 ಮಾದರಿಯ ಆಶ್ರಯ ಮನೆಗಳನ್ನು ಉದ್ಘಾಟಿಸಿದರು.
ಸೂರಿಲ್ಲದವರಿಗೆ ಸೂರು ಒದಗಿಸಬೇಕು ಎಂಬ ಮಹತ್ವಾಕಾಂಕ್ಷೆಯಿಂದ ಸಚಿವರಾದ ಶಿವರಾಮ ಹೆಬ್ಬಾರ್ ಹೆಬ್ಬಾರ್ ನಗರದಲ್ಲಿ ಜಿ + 2 ಮಾದರಿಯ 579 ಆಶ್ರಯ ಮನೆಗಳನ್ನು ನಿರ್ಮಿಸಿ ಲೋಕಾರ್ಪಣೆಗೊಳಿಸುವ ಮೂಲಕವಾಗಿ ಬಡವರಿಗೆ ಸೂರಿನ ಭದ್ರತೆಯನ್ನು ಒದಗಿಸಿದ್ದಾರೆ.
ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷರಾದ ಗೋಪಾಲಕೃಷ್ಣ ಗಾಂವ್ಕರ್, ಜಿಲ್ಲಾ ಪಂಚಾಯತ ಮಾಜಿ ಸದಸ್ಯರಾದ ವಿಜಯ ಮಿರಾಶಿ,ಪ.ಪಂ ಅಧ್ಯಕ್ಷರಾದ ಸುನಂದಾ ದಾಸ್ , ಉಪಾಧ್ಯಕ್ಷರಾದ ಶ್ಯಾಮಲಿ ಪಾಟಣಕರ್, ಪಟ್ಟಣ ಪಂಚಾಯತ ಸದಸ್ಯರು, ಅಧಿಕಾರಿಗಳು ಸೇರಿದಂತೆ ಪಕ್ಷದ ವಿವಿಧಸ್ಥರದ ಪದಾಧಿಕಾರಿಗಳು, ಕಾರ್ಯಕರ್ತರು ಫಲಾನುಭವಿಗಳು ಉಪಸ್ಥಿತರಿದ್ದರು.