Slide
Slide
Slide
previous arrow
next arrow

ಮಾ.26ಕ್ಕೆ ‘ಹಣತೆ’ ಕುಮಟಾ ತಾಲೂಕು ಘಟಕ ಉದ್ಘಾಟನೆ

300x250 AD

ಕುಮಟಾ: ‘ಹಣತೆ’ ಸಾಹಿತ್ಯಕ ಸಾಂಸ್ಕೃತಿಕ ಜಗಲಿ ಉತ್ತರ ಕನ್ನಡ ಜಿಲ್ಲೆ ಈ ಸಂಘಟನೆಯ ತಾಲೂಕು ಘಟಕದ ನೂತನ ಕಾರ್ಯಕಾರಿ ಸಮಿತಿ ಉದ್ಘಾಟನಾ ಕಾರ್ಯಕ್ರಮ ಮಾ.26ರ ಮುಂಜಾನೆ 10.30ಕ್ಕೆ ಪಟ್ಟಣದ ಹಳೆ ಮೀನುಪೇಟೆ ರಸ್ತೆಯಲ್ಲಿರುವ ಸಮುದಾಯ ಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ‘ಹಣತೆ’ ಜಿಲ್ಲಾಧ್ಯಕ್ಷ ಅರವಿಂದ ಕರ್ಕಿಕೋಡಿ ವಹಿಸಲಿದ್ದು ಉದ್ಘಾಟನೆಯನ್ನು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ, ಹಿರಿಯ ರಂಗಕರ್ಮಿ ಕಾಸರಗೋಡು ಚಿನ್ನಾ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಹಿರಿಯ ರಂಗಕರ್ಮಿ ಪೂರ್ಣಿಮಾ ಗಾಂವಕರ ನಾಯಕ ಪಾಲ್ಗೊಳ್ಳಲಿದ್ದಾರೆ.

ಹಣತೆ ಜಿಲ್ಲಾ ಪ್ರಧಾನ ಸಂಚಾಲಕ ಎನ್. ಜಯಚಂದ್ರನ್, ಜಿಲ್ಲಾ ಕಾರ್ಯದರ್ಶಿ ಉದಯ ಮಡಿವಾಳ, ಜಿಲ್ಲಾ ಸಮಿತಿ ಸದಸ್ಯರಾದ ಡಾ. ಶ್ರೀಧರ ಗೌಡ ಉಪ್ಪಿನಗಣಪತಿ, ಕಮಲಾ ಕೊಂಡದಕುಳಿ, ಹಣತೆ ಹೊನ್ನಾವರ ಘಟಕದ ಅಧ್ಯಕ್ಷ ಪ್ರಶಾಂತ ಹೆಗಡೆ ಮೂಡಲಮನೆ, ಅಂಕೋಲಾ ಘಟಕದ ಅಧ್ಯಕ್ಷ ಅಕ್ಷಯ ನಾಯ್ಕ ಬೊಬ್ರುವಾಡ ಗೌರವ ಉಪಸ್ಥಿತಿ ಇರುವರು ಎಂದು ‘ಹಣತೆ’ ಕುಮಟಾ ತಾಲೂಕು ಘಟಕದ ಅಧ್ಯಕ್ಷ ಪ್ರಕಾಶ ನಾಯ್ಕ ಅಳ್ವೆದಂಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top