ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮೂರನೇ ಅಲೆ ಮತ್ತು ಭವಿಷ್ಯದಲ್ಲಿ ಎದುರಾಗಬಹುದಾದ ಆರೋಗ್ಯ ತುರ್ತು ಪರಿಸ್ಥಿತಿ ಎದುರಿಸಲು ಸರ್ಕಾರ ಶಕ್ತವಾಗಿದೆ. ಈ ನಿಟ್ಟಿನಲ್ಲಿ ಮೂರು ಸಾವಿರ ದಾದಿಯರು, 7 ಸಾವಿರ ಶುಶ್ರೂಷಕಿಯರು, ಡಿ ದರ್ಜೆ ನೌಕರರ ನೇಮಕಕ್ಕೆ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ.
ನೇಮಕ ಮಾಡಿಕೊಳ್ಳುವ ಮೂರು ಸಾವಿರ ವೈದ್ಯರ ಪೈಕಿ 2 ಸಾವಿರ ಮಂದಿ ತಜ್ಞರಾಗಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ, ಸಮುದಾಯ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ಕೊರೋನಾ ಸೋಂಕಿತರ ಚಿಕಿತ್ಸೆಗೆ ಐಸಿಯು, ಮಕ್ಕಳ ಚಿಕಿತ್ಸೆಗೆ ಪ್ರತ್ಯೇಕ ವಿಭಾಗ ಸ್ಥಾಪಿಸಲಾಗುತ್ತಿದೆ. ಆಮ್ಲಜನಕ ಸೌಲಭ್ಯ, ವೆಂಟಿಲೇಟರ್ ಒದಗಿಸುವ ಜೊತೆಗೆ ಸಿಬ್ಬಂದಿಗಳ ನೇಮಕಾತಿ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಜಿಲ್ಲಾಸ್ಪತ್ರೆಗಳಲ್ಲಿ ಮತ್ತು ತಾಲೂಕಿನ ಆಸ್ಪತ್ರೆಗಳಲ್ಲಿ 6 -7 ಸಾವಿರ ಕಿಲೋ ಲೀಟರ್ ಸಾಮಥ್ರ್ಯದ ಆಮ್ಲಜನಕ ಟ್ಯಾಂಕ್‍ಗಳನ್ನು ಅಳವಡಿಸುವುದಾಗಿಯೂ ಅವರು ತಿಳಿಸಿದ್ದಾರೆ.