ಜೋಯಿಡಾ: ತಾಲೂಕಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಶು ಅಭಿವೃದ್ಧಿ ಇಲಾಖೆ, ಜಿಲ್ಲಾ ಪಂಚಾಯತ ಕಾರವಾರ ಸಹಯೋಗದಲ್ಲಿ ಪೋಷಣಾ ಪಕ್ವಾಡ ಕಾರ್ಯಕ್ರಮಕ್ಕೆ ಶಾಸಕ ಆರ್.ವಿ ದೇಶಪಾಂಡೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಅಂಗನವಾಡಿ ಕಾರ್ಯಕರ್ತರು ತಮ್ಮ ಉತ್ತಮ ಸೇವೆಯ ಮೂಲಕ ಹೆಸರುವಾಸಿಯಾಗಿದ್ದಾರೆ. ಸರ್ಕಾರ ಅವರಿಗೆ ಯೋಗ್ಯ ವೇತನ ನೀಡಬೇಕು. ಚಿಕ್ಕ ಮಕ್ಕಳನ್ನು ತಮ್ಮ ಮಕ್ಕಳಂತೆ ಅಂಗನವಾಡಿ ಕಾರ್ಯಕರ್ತರು ನೋಡಿಕೊಳ್ಳುತ್ತಾರೆ. ಅವರ ಶ್ರಮಕ್ಕೆ ನನ್ನ ಅಭಿನಂದನೆಗಳು ಎಂದು ಕಾರ್ಯಕ್ರಮಕ್ಕೆ ಆಗಮಿಸಿದ್ದ ಮಗುವಿಗೆ ಅಕ್ಕಿ ಪಾಯಸ ತಿನ್ನಿಸಿದರು.
ನಂತರ ಈ ಹಿಂದೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮೊದಲ ಮೂರು ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ನೀಡುವ ಲ್ಯಾಪ್‌ಟಾಪ್ ವಿತರಿಸಿದರು. ನಂತರ ಅಂಗನವಾಡಿ ಕಾರ್ಯಕರ್ತೆಯರು ಮಾಡಿದ ಸಿಹಿ ತಿಂಡಿ ಪ್ರದರ್ಶನದಲ್ಲಿ ಭಾಗವಹಿಸಿ ಸಿಹಿ ತಿಂಡಿಯನ್ನು ತಿಂದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ಸದಾನಂದ ದಬ್ಗಾರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿನಯ ದೇಸಾಯಿ, ರಾಜ್ಯ ಕಿಸಾನ್ ಕಾಂಗ್ರೆಸ್‌ನ ಕಾರ್ಯದರ್ಶಿ ರವಿ ರೇಡ್ಕರ್, ಜಿ.ಪಂ. ಮಾಜಿ ಸದಸ್ಯ ರಮೇಶ್ ನಾಯ್ಕ, ತಹಶಿಲ್ದಾರರ ಬಸವರಾಜ ಟಿ., ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಶಾರದಾ ಮರಾಠೆ ಇತರರು ಇದ್ದರು.