ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಪ್ರಬಲ ಮಾರುತಗಳ ಪ್ರಭಾವದಿಂದಾಗಿ ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಬಹುತೇಕ ಭಾಗಗಳಲ್ಲಿ ಆ.18 ರಿಂದ 20ರವರೆಗೂ ಮಳೆಯ ಅಬ್ಬರ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕ ಸೇರಿದಂತೆ ಕೇರಳ, ತಮಿಳುನಾಡಿನಲ್ಲೂ ಮಳೆಯಾಗಲಿದೆ ಎಂದು ತಿಳಿದು ಬಂದಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿ 7ರಿಂದ 11 ಸೆಂ.ಮೀ ಮಳೆಯಾಗುವ ನಿರೀಕ್ಷೆಯಿದೆ. ರಾಜ್ಯದ 8 ಜಿಕಲ್ಲೆಗಳಲ್ಲಿ ಇಂದಿನಿಂದ 3 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ವರುಣನ ಅಬ್ಬರ ಮುಂದುವರೆಯಲಿದೆ. ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.