ಭಟ್ಕಳ: ತಾಲೂಕಾಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯಾಧಿಕಾರಿಗಳಿಗೆ ಮತ್ತು ಶುಶ್ರೂಷಕಿಯರಿಗೆ ಯುವಕನೋರ್ವ ಅವಾಚ್ಯ ಶಬ್ದದಿಂದ ಬೈದು ಕರ್ತವ್ಯಕ್ಕೆ ಅಡ್ಡಿಪಡಿಸಿ, ಕೊಲೆ ಬೆದರಿಕೆ ಹಾಕಿ ಪರಾರಿಯಾಗಿರುವ ಘಟನೆ ನಡೆದಿದ್ದು, ಈ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹನುಮಾನನಗರದ ಸಂಜಯ ನಾಯ್ಕ ಆರೋಪಿಯಾಗಿದ್ದು, ಈತ ತಾಲೂಕಾ ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯಾಧಿಕಾರಿಗಳಿಗೆ ಮತ್ತು ಶುಶ್ರೂಷಕಿಯರಿಗೆ ಅವಾಚ್ಯ ಶಬ್ದದಿಂದ ಬೈದು ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೇ, ವಿಚಾರಿಸಲು ಹೋದ ತಾಲೂಕಾ ಆಸ್ಪತ್ರೆಯ ವೈದ್ಯಾಧಿಕಾರಿಗೆ ಅವಾಚ್ಯ ಶಬ್ದದಿಂದ ಬೈದು ಕೊಲೆ ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿ ಆತಂಕವನ್ನುಂಟುಪಡಿಸಿ ಹೋಗಿದ್ದಾನೆ ಎಂದು ದೂರು ದಾಖಲಾಗಿದೆ.