ಶಿರಸಿ: ಟಿವಿಎಸ್ ಎಕ್ಸಲ್ ಮೇಲೆ ಸಾಗುತ್ತಿದ್ದ ವ್ಯಕ್ತಿಯೋರ್ವನಿಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನಲ್ಲಿ ನಡೆದಿದೆ.
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರನ ಟಿವಿಎಸ್ ಎಕ್ಸೆಲ್ ಸಂಪೂರ್ಣ ಜಖಂ ಆಗಿದ್ದು, ಆತನಿಗೂ ಗಂಭೀರ ಸ್ವರೂಪದ ಗಾಯಗಳಾಗಿವೆ. ಹೊಸಗದ್ದೆಯ ಓಣಿಕೇರಿ ನಿವಾಸಿ ಆತ್ಮಾತಾಮ ಶಂಕರ್ ಪಂಡಿತ ಗಾಯಗೊಂಡ ವ್ಯಕ್ತಿ. ಬನವಾಸಿ ಕಡೆಯಿಂದ ಶಿರಸಿ ಕಡೆಗೆ ವೇಗವಾಗಿ ಕಾರು ಚಲಾಯಿಸಿಕೊಂಡು ಬಂದ ವೇಳೆ ಈ ದುರ್ಘಟನೆ ನಡೆದಿದ್ದು, ಬನವಾಸಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.