• Slide
    Slide
    Slide
    previous arrow
    next arrow
  • ಮೇ.10 ಕ್ಕೆ ರಾಜ್ಯದಲ್ಲಿ ಚುನಾವಣೆ; ಮೇ.13 ಕ್ಕೆ ಮತ ಎಣಿಕೆ

    300x250 AD

    ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಯ ದಿನಾಂಕ ಘೋಷಣೆಯಾಗಿದೆ. ಮುಖ್ಯ ಚುನಾವಣೆ ಆಯುಕ್ತ ರಾಜೀವ ಕುಮಾರ ಮತದಾನ ಮತ್ತು ಚುನಾವಣೆಯ ಇತರ ಪ್ರಕ್ರಿಯೆಗಳ ದಿನಾಂಕವನ್ನು ಪ್ರಕಟಿಸಿದರು.

    ಚುನಾವಣೆ ನೀತಿ ಸಂಹಿತೆ ಇಂದಿನಿಂದಲೇ ಜಾರಿಗೆ ಬಂದಿದೆ. ಮತದಾನ ಮೇ10 ರಂದು ನಡೆಯಲಿದ್ದು, ಮತ ಎಣಿಕೆ ಮೇ.13 ರಂದು ನಡೆಯಲಿದೆ. ಒಂದೇ ಹಂತದಲ್ಲಿ ಚುನಾವಣೆ ನಡೆಸಲು ಆಯೋಗ ನಿರ್ಧರಿಸಿದೆ. ನಾಮಪತ್ರ ಸಲ್ಲಿಕೆ ಏಪ್ರಿಲ್ ರಿಂದ ಆರಂಭವಾಗಲಿದೆ.

    ಮೇ 24ಕಕ್ಕೆ 15ನೇ ವಿಧಾನಸಭೆ ಅವಧಿ ಮುಕ್ತಾಯವಾಗಲಿದೆ. ಚುನಾವಣೆಗೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕರ್ನಾಟಕದಲ್ಲಿ 5 ಕೋಟಿ 21 ಲಕ್ಷ ಮತದಾರರಿದ್ದಾರೆ. ಪುರುಷ ಮತದಾರರು-2,63,43,561, ಮಹಿಳೆಯರು 2,59,26,319 ಮತದಾರರಿದ್ದಾರೆ. ತೃತೀಯಲಿಂಗಿಗಳು 4,699 ಮತದಾರರು ಇದ್ದಾರೆ. 12.15 ಲಕ್ಷ ಯುವ ಮತದಾರರಿದ್ದಾರೆ. 18-19 ವರ್ಷದ ವಯಸ್ಸಿನ ಮತದಾರರ ಸಂಖ್ಯೆ 9,17,241.

    ವಿಕಲಚೇತನರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶ ಕಲ್ಪಿಸಲಾಗುವುದು. ಇದೇ ಮೊದಲ ಬಾರಿ ಕರ್ನಾಟಕದಲ್ಲಿ 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶ ನೀಡಲಾಗಿದೆ ಎಂದರು.

    300x250 AD

    ಜೇನುಕುರುಬ, ಕಾಡುಕುರುಬ ಮತದಾರರಿಗೆ ಪ್ರತ್ಯೇಕ ಬೂತ್ ವ್ಯವಸ್ಥೆ ಮಾಡಲಾಗುವುದು. ರಾಜ್ಯದಲ್ಲಿ 58,282 ಮತಗಟ್ಟೆಗಳ ಸ್ಥಾಪನೆ ಮಾಡಲಾಗಿದೆ. ಗ್ರಾಮಾಂತರ ಪ್ರದೇಶದಲ್ಲಿ 34,219 ಮತಗಟ್ಟೆ, ಮಹಿಳಾ ಸಿಬ್ಬಂದಿ ನಿರ್ವಹಿಸುವ ಮತಗಟ್ಟೆ ಸಂಖ್ಯೆ 1,320,224 ಕ್ಷೇತ್ರಗಳಲ್ಲಿ ತಲಾ ಒಂದು ಯುವ ಮತಗಟ್ಟೆ ಸ್ಥಾಪನೆ.

    ಅಭ್ಯರ್ಥಿಗಳ ಮಾಹಿತಿ ವೆಬ್ ಸೈಟ್ ನಲ್ಲಿ ಲಭ್ಯ. ಮತದಾರರಲ್ಲಿ ಜಾಗೃತಿ ಮೂಡಿಸಲು ಆಯೋಗದಿಂದ ಕ್ರಮ

    Share This
    300x250 AD
    300x250 AD
    300x250 AD
    Leaderboard Ad
    Back to top