• Slide
  Slide
  Slide
  previous arrow
  next arrow
 • ಚುನಾವಣಾ ಘೋಷಣೆ ಪೂರ್ವವೇ ಕಾರ್ಯಾಚರಣೆ ನಡೆಸಲಾಗಿದೆ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

  300x250 AD

  ಕಾರವಾರ: ಚುನಾವಣಾ ನೀತಿ ಸಂಹಿತೆ ಜಾರಿಗೂ ಎರಡು ವಾರಗಳ ಮೊದಲೇ ಪ್ರಾಥಮಿಕ ಹಂತದ ಚುನಾವಣಾ ಕಾರ್ಯಗಳನ್ನ ಜಿಲ್ಲಾಡಳಿತ ಆರಂಭಿಸಿದ್ದು, ಚೆಕ್‌ಪೋಸ್ಟ್ಗಳಲ್ಲಿ ಸುಮಾರು 69 ಲಕ್ಷ ಮೌಲ್ಯದ ವಸ್ತುಗಳನ್ನ ವಶಪಡಿಸಿಕೊಂಡಿದ್ದಾಗಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದರು.
  ನಗರದ ಜಿಲ್ಲಾಧಿಕಾರಿ ಕಛೇರಿಯ ಸಭಾಭವನದಲ್ಲಿ ನಡೆದ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಈಗಾಗಲೇ ಜಿಲ್ಲೆಯಾದ್ಯಂತ ಇದ್ದ ರಾಜಕೀಯ ವ್ಯಕ್ತಿಗಳ ಬ್ಯಾನರ್, ಬಂಟಿoಗ್ಸ್ಗಳನ್ನ ತೆರವುಗೊಳಿಸುವ ಕಾರ್ಯ ಮಾಡಲಾಗಿದೆ. ಇಂದಿನಿoದ ಮಾದರಿ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ರಾಜಕೀಯ ವ್ಯಕ್ತಿಗಳ ಫೋಟೋಗಳಿರುವ ಬ್ಯಾನರ್‌ಗಳು ಹಾಗೂ ಸರ್ಕಾರದ ವೆಬ್‌ಸೈಟ್‌ಗಳಿಂದ ಅದನ್ನು ಕೂಡಲೇ ತೆರವುಗೊಳಿಸಲಾಗುವುದು ಎಂದರು.
  ಈಗಾಗಲೇ ಜಿಲ್ಲೆಯಾದ್ಯಂತ 25 ಚೆಕ್‌ಪೋಸ್ಟ್ಗಳನ್ನ ನಿರ್ಮಿಸಿದ್ದು ಚುನಾವಣೆಯಲ್ಲಿ ಆಮಿಷ ಒಡ್ಡುವ ನಿಟ್ಟಿನಲ್ಲಿ ಅಕ್ರಮವಾಗಿ ಸಾಗಾಟಗಳ ಮೇಲೆ ನಿಗಾವಹಿಸಲಾಗಿದೆ. ಈಗಾಗಲೇ ವಿವಿಧ ಪ್ರಕರಣಗಳಲ್ಲಿ ಗೋವಾದಿಂದ ರಾಜ್ಯಕ್ಕೆ ಅಕ್ರಮವಾಗಿ ಸಾಗಾಟವಾಗುತ್ತಿದ್ದ 40 ಲಕ್ಷ ಮೌಲ್ಯದ ಗೋವಾ ಮದ್ಯವನ್ನ ವಶಪಡಿಸಿಕೊಳ್ಳಲಾಗಿದೆ. ಎರಡು ಪ್ರಕರಣಗಳಲ್ಲಿ ಒಟ್ಟೂ 10 ಲಕ್ಷ ರೂಪಾಯಿ ದಾಖಲೆರಹಿತ ಹಣವನ್ನ ವಶಪಡಿಸಿಕೊಳ್ಳಲಾಗಿದ್ದು, ದಾಖಲೆರಹಿತವಾಗಿ ಸಾಗಿಸಲಾಗುತ್ತಿದ್ದ 7.5 ಲಕ್ಷ ಮೌಲ್ಯದ ಬೆಳ್ಳಿಯನ್ನು ಜಪ್ತುಪಡಿಸಿಕೊಳ್ಳಲಾಗಿದೆ. ಉಳಿದಂತೆ ಗಾಂಜಾ, ಚರಸ್‌ನಂತಹ ಮಾದಕ ವಸ್ತುಗಳನ್ನೂ ಸಹ ಭಾರೀ ಪ್ರಮಾಣದಲ್ಲಿ ಪತ್ತೆಹಚ್ಚಿದ್ದು ಒಟ್ಟೂ 69 ಲಕ್ಷ ಮೌಲ್ಯದ ಅಕ್ರಮವಾಗಿ ಸಾಗಿಸುತ್ತಿದ್ದ ವಸ್ತುಗಳನ್ನ ಈಗಾಗಲೇ ಜಪ್ತುಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.
  ಇನ್ನು ಸರ್ಕಾರದಿಂದ ಜಾರಿಯಾದ ಕಾಮಗಾರಿಗಳಲ್ಲಿ ಆರಂಭವಾಗಿರುವ, ಅನುಮೋದನೆಯಾಗಿ ಪ್ರಾರಂಭವಾಗದ ಹಾಗೂ ಅನುಮೋದನೆಯಾಗದ ಕಾಮಗಾರಿಗಳ ಪಟ್ಟಿಯನ್ನು ಮಾಡಲಾಗುತ್ತಿದೆ. ಇದರಿಂದ ನೀತಿ ಸಂಹಿತೆ ಉಲ್ಲಂಘನೆಯಾಗದ ರೀತಿಯಲ್ಲಿ ಕಾಮಗಾರಿಗಳ ಕೆಲಸದ ಮೇಲೂ ನಿಗಾವಹಿಸಲು ಕ್ರಮ ಕೈಗೊಳ್ಳಲಾಗಿದೆ. ಇದರೊಂದಿಗೆ ಮಾಧ್ಯಮಗಳ ಮೇಲೂ ನಿಗಾ ಇರಿಸಲಾಗುತ್ತಿದ್ದು ಪ್ರಕಟವಾಗುವ ಜಾಹಿರಾತುಗಳು ಹಾಗೂ ಸುದ್ದಿಗಳಿಂದ ನೀತಿಸಂಹಿತೆ ಉಲ್ಲಂಘನೆಯಾಗುವoತಿದ್ದಲ್ಲಿ ಅಂತಹುದರ ಮೇಲೂ ಸಹ ಕ್ರಮ ಕೈಗೊಳ್ಳಲಾಗುವುದು ಎಂದರು.

  300x250 AD
  Share This
  300x250 AD
  300x250 AD
  300x250 AD
  Leaderboard Ad
  Back to top