Slide
Slide
Slide
previous arrow
next arrow

ರಾಜಕೀಯ ಪಕ್ಷಗಳು ನೀತಿ ಸಂಹಿತೆ ಪಾಲಿಸಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

300x250 AD

ಕಾರವಾರ: ವಿಧಾನಸಭಾ ಚುನಾವಣೆ 2023ಕ್ಕೆ ಸಂಬಂಧಿಸಿದಂತೆ ಹೊರಡಿಸಿರುವ ನೀತಿ ಸಂಹಿತೆಯ ಪಾಲನೆಯಲ್ಲಿ ಅಧಿಕಾರಿಗಳೊಂದಿಗೆ ರಾಜಕೀಯ ಪಕ್ಷಗಳ ಸಹಕಾರವು ಅತಿ ಅವಶ್ಯಕವಾಗಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಹೇಳಿದರು.
ಇಲ್ಲಿನ ಜಿಲ್ಲಾಧಿಕಾರಿಗಳ ಕಾರ್ಯಾಲಯದ ನ್ಯಾಯಾಲಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ರಾಜಕೀಯ ಪಕ್ಷಗಳ ಸಭೆಯಲ್ಲಿ ಮಾತನಾಡಿದ ಅವರು, ರಾಜಕೀಯ ಪಕ್ಷಗಳು ಸಮಾರಂಭಗಳನ್ನು ಮಾಡುವಂತಹ ಸಂದರ್ಭದಲ್ಲಿ ಚುನಾವಣಾ ಅಧಿಕಾರಿಗಳಿಂದ ಪೂರ್ವಾನುಮತಿ ಪಡೆದುಕೊಳ್ಳಬೇಕು ಹಾಗೂ ಜಾಹೀರಾತುಗಳನ್ನು ಪತ್ರಿಕೆಗಳಲ್ಲಿ ಪ್ರಕಟಿಸುವ ಮುಂಚಿತವಾಗಿ ಸಂಬ0ಧಪಟ್ಟ ಅಧಿಕಾರಿಗಳಿಂದ ಅನುಮತಿಯನ್ನು ಪಡೆದುಕೊಂಡು ಪ್ರಕಟಿಸುವಂತೆ ಸೂಚಿಸಿದರು.
ಹಣಕಾಸಿನ ವ್ಯವಹಾರಗಳಾಗಲಿ ಅಥವಾ ಮತದಾರರಿಗೆ ಆಮಿಷ ಒಡ್ಡುವಂತಹ ಪರಿಕರಣಗಳು ಕಂಡುಬ0ದಲ್ಲಿ ಅಂಥವರ ವಿರುದ್ಧ ಸೂಕ್ತ ಕ್ರಮ ವಹಿಸಲಾಗುವುದು. ರಾಜಕೀಯ ವ್ಯಕ್ತಿಗಳು ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವುದನ್ನು ಕಡಿಮೆ ಮಾಡಿಕೊಳ್ಳಬೇಕು. ಒಂದುವೇಳೆ ಭಾಗವಹಿಸಿದ್ದಲ್ಲಿ ಪಕ್ಷದ ಕುರಿತು ಪ್ರಚಾರ ಮಾಡುವುದು ಕಂಡುಬ0ದಲ್ಲಿ ಅಂಥವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ರಾಜಕೀಯ ವ್ಯಕ್ತಿಗಳು ಸಾಮಾಜಿಕ ಮಾಧ್ಯಮಗಳ ಬಳಕೆಯನ್ನು ಆದಷ್ಟು ಕಡಿಮೆ ಮಾಡಿಕೊಳ್ಳಬೇಕು. ಈಗಾಗಲೇ ಸೋಶಿಯಲ್ ಮೀಡಿಯಾ ಸೆಲ್ ಆರಂಭಿಸಿದ್ದು, ಇದು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿದೆ ಎಂದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಜಯಂತ್ ಎಚ್.ವಿ., ಚುನಾವಣೆ ಶಿರಸ್ತೇದಾರ ಶೇಖ್, ಕಾಂಗ್ರೆಸ್ ಪಕ್ಷದಿಂದ ಕೆ.ಶಂಭು ಶೆಟ್ಟಿ, ಬಿಜೆಪಿ ಪಕ್ಷದಿಂದ ಮನೋಜ್ ಭಟ್, ಜೆಡಿಎಸ್ ಪಕ್ಷದಿಂದ ಸಂದೀಪ್ ಬಂಟ್ ಇದ್ದರು.

300x250 AD
Share This
300x250 AD
300x250 AD
300x250 AD
Back to top