• Slide
    Slide
    Slide
    previous arrow
    next arrow
  • ಆಪ್ 2ನೇ ಪಟ್ಟಿ: ಕಾರವಾರದ ಆಶಿಶ್, ಭಟ್ಕಳದ ನಸೀಮ್, ಕುಮಟಾದ ರೇಖಾಗೆ ಟಿಕೆಟ್

    300x250 AD

    ಕಾರವಾರ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೆಲ ದಿನಗಳ ಹಿಂದೆ 80 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದ ಆಮ್ ಆದ್ಮಿ ಪಕ್ಷವು ಶುಕ್ರವಾರ 60 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪೈಕಿ ಉತ್ತರ ಕನ್ನಡ ಜಿಲ್ಲೆಯ ಕರಾವಳಿಯ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನ ಘೋಷಿಸಿದೆ.

    ಪಕ್ಷದ ಬೆಂಗಳೂರು ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪಕ್ಷದ ರಾಜ್ಯ ಚುನಾವಣಾ ಉಸ್ತುವಾರಿ ದಿಲೀಪ್ ಪಾಂಡೆ ಹಾಗೂ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿಯವರು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಅದರಂತೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಿಂದ ನಸೀಮ್ ಅಹ್ಮದ್ ಖಾನ್, ಕುಮಟಾದಿಂದ ರೇಖಾ ನಾಯ್ಕ, ಕಾರವಾರದಿಂದ ಆಶಿಶ್ ಗಾಂವಕರ್ ಅವರಿಗೆ ಟಿಕೆಟ್ ಘೋಷಿಸಲಾಗಿದೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top