ಶಿರಸಿ : ಜಿಲ್ಲೆಯಲ್ಲಿ ಪ್ರಬಲ ಮತದಾರರನ್ನು ಹೊಂದಿರುವ ಸಮುದಾಯಗಳಲ್ಲಿ ಒಂದಾಗಿರುವ ಹವ್ಯಕ ಸಮುದಾಯಕ್ಕೆ ಕಾಂಗ್ರೆಸ್ ಟಿಕೆಟ್ ನೀಡಬೇಕು ಎಂದು ಜಿಲ್ಲಾ ಯೂಥ್ ಕಾಂಗ್ರೆಸ್ ಉಪಾಧ್ಯಕ್ಷ ಕುಮಾರ್ ಜೋಶಿ ಒತ್ತಾಯಿಸಿದ್ದಾರೆ.
ಇಲ್ಲಿನ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿ ಆಯೋಜಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆ ಇದೆ. ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಜಿಲ್ಲೆಯಲ್ಲಿ ಕೆಲವು ಸ್ವ ಹಿತಾಸಕ್ತಿಗಳಿಂದ ಸಾಮಾಜಿಕ ನ್ಯಾಯಕ್ಕೆ ತೊಂದರೆ ಉಂಟಾಗುತ್ತಿದೆ. ಕಾಂಗ್ರೆಸ್ ಈಗಾಗಲೇ ಮೂರು ಕ್ಷೇತ್ರದಲ್ಲಿ ಟಿಕೆಟ್ ಘೋಷಣೆ ಮಾಡಿದ್ದು, ಮೂರು ಕ್ಷೇತ್ರಗಳಲ್ಲಿ ಟಿಕೆಟ್ ಘೋಷಣೆ ಬಾಕಿ ಇದೆ. ಆ ಕ್ಷೇತ್ರದಲ್ಲಿ ಸಾಮಾಜಿಕ ನ್ಯಾಯಕ್ಕೆ ಬದ್ದವಾಗಿ ಹವ್ಯಕ ಸಮುದಾಯಕ್ಕೆ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿದರು. ದೇಶಪಾಂಡೆ ಅವರು ಸಾಮಾಜಿಕ ನ್ಯಾಯಕ್ಕೆ ಬದ್ದವಾಗಿ ರಾಜಕೀಯ ಮಾಡಿಕೊಂಡು ಬಂದಿದ್ದಾರೆ. ಹವ್ಯಕ ಬ್ರಾಹ್ಮಣ ಸಮುದಾಯದವರು ಸುಮಾರು ನಾಲ್ಕುವರೆ ಲಕ್ಷ ಮತದಾರರು ಜಿಲ್ಲೆಯಲ್ಲಿದ್ದಾರೆ. ಜಿಲ್ಲೆಯಲ್ಲಿ ಹವ್ಯಕ ಸಮುದಾಯಕ್ಕೆ ಕಾಂಗ್ರೆಸ್ ನಿಂದ ಪ್ರಾತಿನಿಧ್ಯ ನೀಡಬೇಕು. ಪಕ್ಷದ ಟಿಕೆಟ್ ಹಂಚಿಕೆಯಲ್ಲಿ ಹವ್ಯಕ ಸಮುದಾಯಕ್ಕೆ ಆದ್ಯತೆ ನೀಡಬೇಕು. ಶಿರಸಿ, ಯಲ್ಲಾಪುರ, ಕುಮಟಾ ಹವ್ಯಕರ ಪ್ರಾಬಲ್ಯ ಇರುವ ಕ್ಷೇತ್ರವಾಗಿದ್ದು, ಇದರಲ್ಲಿ ಎರಡು ಕ್ಷೇತ್ರವನ್ನು ಹವ್ಯಕ ಸಮುದಾಯಕ್ಕೆ ನೀಡಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮಂಜುನಾಥ, ಮಹಾಬಲೇಶ್ವರ ಭಟ್ಟ, ಶ್ರೀಧರ ಹೆಗಡೆ. ಜಿ. ಡಿ. ಭಟ್ ಯಲ್ಲಾಪುರ, ವಿ. ಜಿ. ಭಾಗ್ವತ್ ಯಲ್ಲಾಪುರ, ಬಾಲಚಂದ್ರ ಹೆಗಡೆ, ಇದ್ದರು.