ಕಾರವಾರ: ಸಾರ್ವಜನಿಕ ಶಿಕ್ಷಣ ಇಲಾಖೆಯು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರಕಾರಿ ಪ್ರೌಢಶಾಲಾ ದೈಹಿಕ ಶಿಕ್ಷಕರ ಗ್ರೇಡ್-1 ತಾತ್ಕಾಲಿಕ ಜೇಷ್ಠತಾಪಟ್ಟಿ ಯಾದಿಯನ್ನು ಈಗಾಗಲೇ ಜಿಲ್ಲೆಯ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಕಳುಹಿಸಲಾಗಿದೆ.
ತಾತ್ಕಾಲಿಕ ಜೇಷ್ಠತಾ ಪಟ್ಟಿಗೆ ಸಂಬಂಧಿಸಿದ ಆಕ್ಷೇಪಣೆಗಳು ಇದ್ದಲ್ಲಿ ತ್ರಿಪ್ರತಿಗಳಲ್ಲಿ (3 ಮೂಲ ಪ್ರತಿ ಧೃಢೀಕರಿಸಿದ ನಿಗದಿತ ನಮೂನೆಯಲ್ಲಿ) ದಾಖಲೆಗಳೊಂದಿಗೆ ಏ.15ರೊಳಗೆ ಸಲ್ಲಿಸಬೇಕು. ಒಂದುವೇಳೆ ಯಾವುದೇ ಆಕ್ಷೇಪಣೆಗಳು ಇಲ್ಲದಿದ್ದಲ್ಲಿ ಶೂನ್ಯವರದಿಯನ್ನು ಕಡ್ಡಾಯವಾಗಿ ಸಲ್ಲಿಸಬೇಕು ಅವಧಿಯ ಮುಗಿದ ನಂತರ ಬಂದ ಆಕ್ಷೇಪಣೆಗಳನ್ನು ಪರಿಗಣಿಸಲು ಅವಕಾಶವಿರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ Tel:+9108382221345 ಗೆ ಸಂಪರ್ಕಿಸಿ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.