Slide
Slide
Slide
previous arrow
next arrow

ಸ್ಟೇರಿಂಗ್ ಕಟ್: ಬಸ್ ಪಲ್ಟಿ, ತಪ್ಪಿದ ದುರ್ಘಟನೆ

300x250 AD

ಸಿದ್ದಾಪುರ : ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾದ ಘಟನೆ ತಾಲೂಕಿನ 16ನೇ ಮೈಲಿಕಲ್ ಬಳಿ ನಡೆದಿದೆ.

ಹಳಿಯಾಳದಿಂದ ಶಿರಸಿ ಮೂಲಕ ಸಾಗರಕ್ಕೆ ಹೋಗುತ್ತಿದ್ದ ಸರಕಾರಿ ಬಸ್ ತಾಲೂಕಿನ 16ನೇ ಮೈಲಕಲ್ ಹತ್ತಿರ ಚಾಲಕನ ನಿಯಂತ್ರಣ ತಪ್ಪಿ ಗಿಡಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಬಸ್ಸಿನಲ್ಲಿ ಒಟ್ಟು 44 ಪ್ರಯಾಣಿಕರು ಪ್ರಯಾಣಿಸುತ್ತಿದ್ದು, ಅದೃಷ್ಟವಶಾತ್ ಎಲ್ಲರೂ ಪ್ರಣಾಪಾಯದಿಂದ ಪಾರಾಗಿದ್ದಾರೆ. ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

300x250 AD

ಬಸ್’ನ ಸ್ಟೇರಿಂಗ್ ಕಟ್ ಆಗಿ ಘಟನೆ ನಡೆದಿದೆ ಎನ್ನಲಾಗಿದ್ದು, ಸ್ಥಳಕ್ಕೆ ಸಿದ್ದಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುವಿಗೆ ಚಿಕಿತ್ಸೆಗಾಗಿ ಸಿದ್ದಾಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Share This
300x250 AD
300x250 AD
300x250 AD
Back to top