• first
    second
    third
    previous arrow
    next arrow
  • ಮಿರ್ಜಾನ್ ಪ್ರಾಥಮಿಕ ಶಾಲೆ ನೂತನ ಕೊಠಡಿ ಉದ್ಘಾಟಿಸಿದ ಶಾಸಕ ದಿನಕರ ಶೆಟ್ಟಿ

    300x250 AD


    ಕುಮಟಾ: ಮಿರ್ಜಾನ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕೊಠಡಿ ಮತ್ತು ಆಂಗ್ಲ ಮಾಧ್ಯಮ ತರಗತಿಯನ್ನು ಶಾಸಕ ದಿನಕರ ಶೆಟ್ಟಿ ಉದ್ಘಾಟಿಸಿದರು.


    ನಂತರ ಮಾತನಾಡಿದ ಅವರು ವಿಧ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು.ಈ ನಿಟ್ಟಿನಲ್ಲಿ ಸರ್ಕಾರ ಅನೇಕ ಯೋಜನೆ, ಸೌಲಭ್ಯಗಳನ್ನು ನೀಡುತ್ತಿದೆ.ಇವುಗಳ ಸದುಪಯೋಗ ಪಡೆದುಕೊಂಡು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು.ಈ ದಿಶೆಯಲ್ಲಿ ಪಾಲಕರೂ ಕೂಡ ಮಕ್ಕಳ ಕಡೆಗೆ ಗಮನ ಹರಿಸಬೇಕು. ಕೇವಲ ಶಾಲಾ ಶಿಕ್ಷಣ ಮಾತ್ರವಲ್ಲದೆ ನಮ್ಮ ಸುತ್ತಮುತ್ತಲಿನ ಪರಿಸರ, ಸಾಮಾಜಿಕ ಜವಾಬ್ದಾರಿ ಇವುಗಳ ಕುರಿತಾಗಿಯೂ ಪಾಲಕರು ಮಕ್ಕಳಿಗೆ ತಿಳಿ ಹೇಳಬೇಕು ಎಂದರು.

    300x250 AD


    ಈ ವೇಳೆ ಮಾಜಿ ಜಿ.ಪಂ ಸದಸ್ಯ ಪ್ರದೀಪ ನಾಯಕ, ಗಣೇಶ್ ಅಂಬಿಗ, ಗ್ರಾಂ.ಪಂ ಅಧ್ಯಕ್ಷರು, ಸದಸ್ಯರುಗಳು, ಶಾಲಾ ಸಿಬ್ಬಂದಿಗಳು ಹಾಗೂ ಊರ ನಾಗರಿಕರು ಹಾಜರಿದ್ದರು.

    Share This
    300x250 AD
    300x250 AD
    300x250 AD
    Leaderboard Ad
    Back to top