Slide
Slide
Slide
previous arrow
next arrow

ಕರ್ನಾಟಕದ ತಿರುಪತಿ ‘ಮಂಜುಗುಣಿ’ ರಥೋತ್ಸವ ಸಂಪನ್ನ

300x250 AD

ಶಿರಸಿ: ಕರ್ನಾಟಕದ ತಿರುಪತಿ ಎಂದೇ ಖ್ಯಾತವಾಗಿರುವ ತಾಲೂಕಿನ ಮಂಜುಗುಣಿ ಶ್ರೀ ವೆಂಕಟರಮಣ ದೇವರ ರಥೋತ್ಸವ ಗುರುವಾರ ಶ್ರದ್ಧಾ ಭಕ್ತಿಯೊಂದಿಗೆ ನೆರವೇರಿತು. ಲಕ್ಷಾಂತರ ಭಕ್ತರು ದೇವರ ದರ್ಶನ ಪಡೆದರು.
ಬೆಳಗ್ಗೆ ಮಹಾರಥ ಶುದ್ಧಿ, ರಥಪೂಜಾ,ರಥಬಲಿ, ರಥಾಗಮನ, ರಥಾರೋಹಣ, ಪೂಜಾ ಪ್ರಾರ್ಥನಾ ರಥ ನಯನ ಕಾರ್ಯಕ್ರಮಗಳು ನಡೆದವು. ಬಳಿಕ ಭಕ್ತರ ಜಯಘೋಷದೊಂದಿಗೆ ರಥ ಎಳೆಯುವ ಕಾರ್ಯಕ್ರಮ ನಡೆಸಲಾಯಿತು. ಬಳಿಕ ಭಕ್ತರಿಗೆ ದರ್ಶನ, ಸೇವೆಗೆ ಅವಕಾಶ ನೀಡಲಾಗಿತ್ತು.
ಸಂಜೆ ಫಲ ಸಮರ್ಪಣೆ, ಮರ್ಯಾದೆ ಕಾಯಿ ಹಂಚುವಿಕೆ, ಫಲತಾಡನ, ರಥಾರೋಹಣ, ವಸಂತ ಪೂಜಾ ಕಾರ್ಯಕ್ರಮಗಳು ನಡೆದವು.
ದೇವಾಲಯದ ಪ್ರಧಾನ ಅರ್ಚಕ ಶ್ರೀನಿವಾಸ ಭಟ್, ಆಡಳಿತ ಮಂಡಳಿಯ ಸದಸ್ಯರು ಇದ್ದು. ಬರುವ ಭಕ್ತರಿಗಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಿಶೇಷ ಸಾರಿಗೆ ಸೌಲಭ್ಯ ಕಲ್ಪಿಸಿತ್ತು.

300x250 AD
Share This
300x250 AD
300x250 AD
300x250 AD
Back to top