ಶಿರಸಿ: ತಾಲೂಕಿನ ಮುಂಡಿಗೇಸರ ಗ್ರಾಮದ ಸಭಾಂಗಣದಲ್ಲಿ ಭಾರತೀಯ ಜನತಾ ಪಕ್ಷದ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ ಅವರು ಶಿರಸಿ ಗ್ರಾಮೀಣ ಮಂಡಲದ ವತಿಯಿಂದ ಆಯೋಜಿಸಿದ್ದ ‘ಬೂತ್ ಅಧ್ಯಕ್ಷರ ಸಮಾವೇಶ’ ವನ್ನು ಉದ್ಘಾಟಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ಯುವ ನಾಯಕರಾದ ವಿವೇಕ್ ಹೆಬ್ಬಾರ್ ಬೂತ್ ಅಧ್ಯಕ್ಷರ ಸಮಾವೇಶದಲ್ಲಿ ಭಾಗಿಯಾಗಿ, ಜಿಲ್ಲಾಧ್ಯಕ್ಷರು ಹಾಗೂ ಪಕ್ಷದ ಪದಾಧಿಕಾರಿಗಳ ಸಮ್ಮುಖದಲ್ಲಿ ಬೂತ್ ಅಧ್ಯಕ್ಷರುಗಳಿಗೆ ನಾಮಫಲಕ ಹಾಗೂ ಪಕ್ಷದ ಧ್ವಜವನ್ನು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋವಿಂದ ನಾಯ್ಕ, ಎನ್.ಎಸ್.ಹೆಗಡೆ, ಚಂದ್ರು ಎಸಳೆ ಹಾಗೂ ಗ್ರಾಮೀಣ ಮಂಡಲದ ಅಧ್ಯಕ್ಷ ಎನ್.ವಿ.ಹೆಗಡೆ ಹಾಗೂ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು, ಬೂತ್ ಅಧ್ಯಕ್ಷರು, ಕಾರ್ಯಕರ್ತರು ಉಪಸ್ಥಿತರಿದ್ದರು.