Slide
Slide
Slide
previous arrow
next arrow

ಜಗಜೀವನರಾಮ್ ಸಮಾಜಕ್ಕೆ ತಮ್ಮ ಪ್ರಾಣ ಮುಡಿಪಾಗಿಟ್ಟವರು: ಡಿಸಿ ಪ್ರಭುಲಿಂಗ ಕವಳಿಕಟ್ಟಿ

300x250 AD

ಕಾರವಾರ: ಸಮಾಜದ ನಿರ್ಮಾಣ ಮತ್ತು ಸಮಾಜದ ಸರ್ವಾಂಗೀಣ ಅಭಿವೃದ್ಧಿಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿದವರಲ್ಲಿ ಹಾಗೂ ಸಮಾಜಕ್ಕೆ ತಮ್ಮ ಪ್ರಾಣ ಮುಡಿಪಾಗಿಟ್ಟವರಲ್ಲಿ ಡಾ.ಬಾಬು ಜಗಜೀವನರಾಮ್‌ರವರು ಕೂಡ ಒಬ್ಬರು ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಹೇಳಿದರು.

ಇಲ್ಲಿನ ಜಿಲ್ಲಾಧಿಕಾರಿಗಳ ಕಾರ್ಯಲಯದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಡಾ.ಬಾಬು ಜಗಜೀವನರಾಮ್ ರವರ 116ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಜ್ಯೋತಿ ಬೆಳಗಿಸಿ, ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.

ಭಾರತ ಸ್ವಾತಂತ್ರ‍್ಯ ಸಂಗ್ರಾಮದ ಹೋರಾಟದಲ್ಲಿ ಡಾ. ಬಾಬು ಜಗಜೀವನರಾಮ್ ಪಾತ್ರ ಅಪಾರವಾದದ್ದು ಭಾರತದಲ್ಲಿ ಸುಧೀರ್ಘವಾಗಿ ಬಂದoತಹ ಅಸ್ಪೃಶ್ಯತೆಯ ಭಾವನೆಯನ್ನು ಹೋಗಲಾಡಿಸಿ ಸಮಾಜದಲ್ಲಿ ಸಮಾನತೆ ತರಲು ಇವರು ನೀಡಿರುವ ಮಾರ್ಗದರ್ಶನ ಅಮೂಲ್ಯವಾದದ್ದು ಹಾಗೂ 1971 ರಲ್ಲಿ ಭಾರತ ಮತ್ತು ಪಾಕಿಸ್ತಾನ ಮಧ್ಯ ಸಂಭವಿಸಿದ ಯುದ್ದದ ಸಮಯದಲ್ಲಿ ಭಾರತದ ರಕ್ಷಣಾ ಸಚಿವರಾಗಿದ್ದ ಇವರು ಸೈನಿಕರಿಗೆ ನೀಡಿದ ಮಾರ್ಗದರ್ಶನವು ಭಾರತ ಸ್ವತಂತ್ರ ರಾಷ್ಟ್ರವಾಗಿ ಹೊರಹೋಮ್ಮಿತು ಎಂದರು.

300x250 AD

ಡಾ. ಬಾಬು ಜಗಜೀವನರಾಮ್ ರವರು ರಾಷ್ಟ್ರದ ಕೃಷಿ ಸಚಿವರಾಗಿ ಹಸಿರು ಕ್ರಾಂತಿಗೆ ಅವರು ನೀಡಿರುವ ಕೊಡುಗೆ ಅಪರವಾಗಿದ್ದು, ಈ ದೇಶದ ಬೆನ್ನೆಲಬು ರೈತ ಹಾಗೂ ಯೋಧ ಈ ಎರಡೂ ಸಮುದಾಯಕ್ಕೆ ಇವರ ಮಾರ್ಗದರ್ಶನ ಸಹಕರಿಯಾಗಿದೆ ಎಂದರು. ಬಳಿಕ ಪ್ರಾಂಶುಪಾಲರು ಚಂದ್ರಶೇಖರ ನಾಯ್ಕ ಅವರು ಡಾ. ಬಾಬು ಜಗಜೀವನರಾಮ್ ಅವರ ಬಗ್ಗೆ ವಿಶೇಷ ಉಪನ್ಯಾಸವನ್ನು ನೀಡಿದರು. ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಅಜ್ಜಪ್ಪ ಸೊಗಲದ, ದಲಿತ ಸಂಘರ್ಷ ಸಮಿತಿಯ ಜಿಲ್ಲಾಧ್ಯಕ್ಷ ದೀಪಕ್ ಬಿ.ಕುಡಾಲಕರ, ದಲಿತ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಎಲಿಷಾ ಎಲಕಪಾಟಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನೌಕರ ಸಂಘದ ಅಧ್ಯಕ್ಷ ಜೆ.ಡಿ ಮನೋಜ,ಜಿಲ್ಲಾ ಪರಿಶಿಷ್ಟ ಪಂಗಡದ ಸಮುದಾಯದ ಅಧ್ಯಕ್ಷ ನಾಗರಾಜ ಸಿ.ತಳವಾರ, ತಾಲೂಕು ಮಟ್ಟದ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top