• Slide
    Slide
    Slide
    previous arrow
    next arrow
  • ಬನವಾಸಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ: ಸಚಿವ ಹೆಬ್ಬಾರ್ ಭಾಗಿ

    300x250 AD

    ಶಿರಸಿ :ತಾಲೂಕಿನ ಬನವಾಸಿಯಲ್ಲಿ ಕಾರ್ಮಿಕ ಸಚಿವರಾದ ಶಿವರಾಮ ಹೆಬ್ಬಾರ್‌ ಶುಕ್ರವಾರ ಬನವಾಸಿ ಶಕ್ತಿ ಕೇಂದ್ರದ ವ್ಯಾಪ್ತಿಯ ಕಾರ್ಯಕರ್ತರ ಸಭೆ ನಡೆಸಿದರು.

    ಈ ವೇಳೆ ಮಾತನಾಡಿದ ಸಚಿವರು, ಐತಿಹಾಸಿಕ ಬನವಾಸಿಯ ಅಭಿವೃದ್ಧಿಗೆ ನಮ್ಮ ರಾಜ್ಯ ಸರ್ಕಾರ ಸಾಕಷ್ಟು ಅನುದಾನ ನೀಡಿದೆ. ಈ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲೂ ಹೆಚ್ಚಿನ ಕಾಮಗಾರಿಗಳು ನಡೆದಿವೆ. ಮುಂಬರುವ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸಿ ಅಭಿವೃದ್ಧಿಗೆ ಸಹಕರಿಸಿ ಎಂದು ತಿಳಿಸಿದರು.

    300x250 AD

    ಈ ಸಭೆಯಲ್ಲಿ ಮಹಾಶಕ್ತಿಕೇಂದ್ರದ ಅಧ್ಯಕ್ಷರು, ಶಕ್ತಿಕೇಂದ್ರದ ಅಧ್ಯಕ್ಷರು, ಬೂತ್‌ ಅಧ್ಯಕ್ಷರು, ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು, ಸ್ಥಳೀಯ ಪ್ರಮುಖರು, ಗ್ರಾಮ ಪಂಚಾಯಿತಿ ಸದಸ್ಯರು, ಮಂಡಲಾಧ್ಯಕ್ಷರು, ವಿವಿಧ ಮೋರ್ಚಾದ ಪದಾಧಿಕಾರಿಗಳು, ಶಕ್ತಿಕೇಂದ್ರದ ಪ್ರಮುಖರು, ಕಾರ್ಯಕರ್ತರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

    Share This
    300x250 AD
    300x250 AD
    300x250 AD
    Leaderboard Ad
    Back to top