• Slide
  Slide
  Slide
  previous arrow
  next arrow
 • ಹಳೆದಾಂಡೇಲಿಯಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ

  300x250 AD

  ದಾಂಡೇಲಿ: ನಾನು ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷನಾಗಿದ್ದಾಗ ಕಾರ್ಮಿಕರಿಗೆ ಯಾವುದೇ ಕಾರಣಕ್ಕೂ ತೊಂದರೆಯಾಗಬಾರದೆ0ದು ಇಲ್ಲಿಯ ಕಾರ್ಖಾನೆಗಳ ಸಮಸ್ಯೆಗಳಿಗೆ ಸ್ಪಂದಿಸಿದ್ದೇನೆ. ಈ ಬಾರಿ ನಿಮ್ಮೆಲ್ಲರ ಸಹಕಾರ ಕೋರಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುತ್ತಿದ್ದು, ಕ್ಷೇತ್ರದಲ್ಲಿ ಈ ಬಾರಿ ಜೆಡಿಎಸ್ ಪಕ್ಷವನ್ನು ಹೆಚ್ಚಿನ ಮತಗಳ ಅಂತರದಿ0ದ ಗೆಲ್ಲಿಸಿಕೊಡಬೇಕೆಂದು ಜೆಡಿಎಸ್ ಅಭ್ಯರ್ಥಿ ಎಸ್.ಎಲ್.ಘೋಟ್ನೇಕರ್ ನಗರದ ಹಳೆದಾಂಡೇಲಿಯಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮನವಿ ಮಾಡಿಕೊಂಡರು.
  ಜೆಡಿಎಸ್ ಘಟಕದ ಅಧ್ಯಕ್ಷ ಅಕ್ರಂ ಖಾನ್ ಮಾತನಾಡಿ, ಈ ಬಾರಿ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷಕ್ಕೆ ಉತ್ತಮ ಸ್ಪಂದನೆ ದೊರೆಯುತ್ತಿದೆ. ಎಸ್.ಎಲ್.ಘೋಟ್ನೇಕರ್ ಅವರು ಹೆಚ್ಚಿನ ಮತಗಳ ಅಂತರದಿ0ದ ಗೆಲ್ಲಲಿದ್ದಾರೆ. ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಲಿದ್ದು, ಘೋಟ್ನೇಕರ್ ಅವರು ಸಚಿವರಾಗಲಿದ್ದಾರೆ ಎಂದರು.
  ವೇದಿಕೆಯಲ್ಲಿ ಮುಖಂಡರುಗಳಾದ ರಿಯಾಜ್ ಶೇಖ್, ಸಂತೋಷ್ ಸೋಮನಾಚೆ, ಯಲ್ಲಪ್ಪ ಮಾಳವನಕರ ಸೇರಿದಂತೆ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.

  300x250 AD
  Share This
  300x250 AD
  300x250 AD
  300x250 AD
  Leaderboard Ad
  Back to top