ಕಾರವಾರ: ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಸಾಧನೆ ಮಾಡಿರುವ ರಾಜ್ಯದ ಹಿರಿಯ ಕ್ರೀಡಾಪಟು, ತರಬೇತುದಾರರಿಗೆ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2020 ನೇ ಸಾಲಿನಲ್ಲಿ ಜೀವಮಾನ ಸಾಧನೆ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯ ಅರ್ಹ ಕ್ರೀಡಾ ಪಟುಗಳು ಸೇವಾಸಿಂಧು ವೆಬ್‍ಸೈಟ್ ಮೂಲಕ ಸೆ. 15 ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕು. ಅರ್ಹ ಕ್ರೀಡಾಪಟುಗಳು ಇದರ ಸದುಪಯೋಗ ಪಡೆಯಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಜಿ, ಗಾಯತ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.