ಹಳಿಯಾಳ: ಕೆಎಲ್‌ಎಸ್ ವಿಡಿಐಟಿಯಲ್ಲಿ 2021-22 ಮತ್ತು 2019-20ನೇ ಸಾಲಿನಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸಮಾರಂಭ ನಡೆಯಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕೈಗಾ ಅಣು ವಿದ್ಯುತ್ ಸ್ಥಾವರದ ಸೈಟ್ ಡೈರೆಕ್ಟರ್ ಪ್ರಮೋದ್ ರಾಯಚೂರ್ ಅವರು ಯುವ ಎಂಜಿನಿಯರ್‌ಗಳಿಗೆ ಸದೃಢ ಭಾರತವನ್ನು ನಿರ್ಮಾಣ ಮಾಡುವಂತೆ ಕರೆ ನೀಡಿದರು. ಉತ್ತಮ ಕೌಶಲ್ಯ ಹಾಗೂ ಸಂವಹನದೊಂದಿಗೆ ಔದ್ಯೋಗಿಕ ಜೀವನದಲ್ಲಿ ಯಶಸ್ಸು ಗಳಿಸುವಂತೆ ಶುಭ ಹಾರೈಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಚಾರ್ಯ ಡಾ.ವಿ.ಎ.ಕುಲಕರ್ಣಿ, ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ ದೇಶದ ಉನ್ನತಿಗೆ ಕಾರಣೀಭೂತರಾಗಬೇಕೆಂದು ವಿದ್ಯಾರ್ಥಿಗಳಿಗೆ ಹೇಳಿದರು. ತಾಂತ್ರಿಕ ವೃತ್ತಿಯ ಜೊತೆ ಜೊತೆಗೆ ಸಮಾಜ ಉಪಯೋಗಿ ಕಾರ್ಯಗಳಲ್ಲಿ ತೊಡಗಿಸಿಕೊಂಡು ಉತ್ತಮ ನಾಗರೀಕರಾಗುವಂತೆ ಆಶಿಸಿದರು.
2021-22 ಹಾಗೂ 2019-20ನೇ ಸಾಲಿನಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಗಣ್ಯರು ಪದವಿ ಪ್ರಮಾಣ ಪತ್ರವನ್ನು ನೀಡಿದರು. ಪ್ರೊ.ಪ್ಲಾಸಿನ್ ಡಯಾಸ್ ಸ್ವಾಗತಿಸಿದರು. ಪ್ರೊ.ಶ್ರೀಗೌರಿ ವಂದಿಸಿದರು. ಸಂಜನಾ ನಿರೂಪಿಸಿದರು. ಪ್ರೊ.ಬಸವರಾಜ ಗೌಡರ್ ಕಾರ್ಯಕ್ರಮ ಸಂಯೋಜಿಸಿದರು. ಮಹಾವಿದ್ಯಾಲಯದ ಎಲ್ಲಾ ಡೀನ್‌ಗಳು, ವಿಭಾಗ ಮುಖ್ಯಸ್ಥರುಗಳು ಹಾಗೂ ಬೋಧಕ- ಬೋಧಕೇತರ ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. 300ಕ್ಕಿಂತ ಅಧಿಕ ವಿದ್ಯಾರ್ಥಿಗಳು ತಮ್ಮ ಪೋಷಕರೊಂದಿಗೆ ಈ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.