• Slide
  Slide
  Slide
  previous arrow
  next arrow
 • ಭಾರತದ ವಿದೇಶಾಂಗ ನೀತಿಯನ್ನು ಶ್ಲಾಘಿಸಿದ ಇಮ್ರಾನ್ ಖಾನ್

  300x250 AD

  ಪಾಕಿಸ್ತಾನ: ಪಾಕಿಸ್ತಾನದ ಮಾಜಿ ಪ್ರಧಾನಿ ತೆಪ್ರೀಕ್-ಇ-ಇನ್ಸಾಫ್ (ಪಿಟಿಐ) ಮುಖ್ಯಸ್ಥ ಇಮ್ರಾನ್ ಖಾನ್ ಮತ್ತೊಮ್ಮೆ ಭಾರತದ ವಿದೇಶಾಂಗ ನೀತಿಯನ್ನು ಶ್ಲಾಘಿಸಿದ್ದಾರೆ. ಭಾರತದಂತೆ ಪಾಕಿಸ್ತಾನ ಕೂಡ ರಷ್ಯಾದಿಂದ ಕಡಿಮೆ ಬೆಲೆಗೆ ಕಚ್ಚಾ ತೈಲವನ್ನು ಪಡೆಯಲು ಬಯಸುತ್ತೇವೆ. ಆದರೆ ಅವಿಶ್ವಾಸ ಗೊತ್ತುವಳಿಯಲ್ಲಿ ತಮ್ಮ ಸರ್ಕಾರ ಪತನಗೊಂಡಿದ್ದರಿಂದ ಅದು ಸಾಧ್ಯವಾಗಲಿಲ್ಲ ಎಂದರು. ಈ ಕಮೆಂಟ್ ಮಾಡಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

  ದುರಾದೃಷ್ಟವಶಾತ್ ಅವರ ಸರ್ಕಾರದ ಪತನವಾದ್ದರಿಂದ ಅದು ಸಾಧ್ಯವಾಗಿಲ್ಲ. ಇದಲ್ಲದೆ, ಪಾಕಿಸ್ತಾನ ಹಿಂದೆಂದೂ ಕಾಣದಷ್ಟು ಆರ್ಥಿಕ ಬಿಕ್ಕಟ್ಟಿನಿಂದ ತತ್ತರಿಸಿದೆ. ಉಕ್ರೇನ್ ಯುದ್ಧ ಪ್ರಾರಂಭವಾದಾಗಿನಿಂದ, ಭಾರತವು ರಷ್ಯಾದಿಂದ ರಿಯಾಯಿತಿ ದರದಲ್ಲಿ ತೈಲವನ್ನು ಖರೀದಿಸುತ್ತಿದೆ. ತಮ್ಮ ದೇಶವೂ ಅದನ್ನು ಖರೀದಿಸಬಹುದಿತ್ತು ಎಂದು ವಿಷಾದ ವ್ಯಕ್ತಪಡಿಸಿದರು.

  300x250 AD

  ಪಾಶ್ಚಿಮಾತ್ಯರ ಒತ್ತಡದ ನಡುವೆಯೂ ತನ್ನ ದೇಶದ ಆರ್ಥಿಕತೆಯನ್ನು ಹೆಚ್ಚಿಸುವ ಸಲುವಾಗಿ ರಷ್ಯಾ ತೈಲವನ್ನು ಖರೀದಿಸಲು ಭಾರತ ಮುಂದಾಗಿದೆ ಎಂದು ಇಮ್ರಾನ್ ಖಾನ್ ಹೊಗಳಿದ್ದಾರೆ. ಅಮೆರಿಕದ ಒತ್ತಡದ ನಡುವೆಯೂ ರಷ್ಯಾದಿಂದ ಅಗ್ಗದ ತೈಲ ಖರೀದಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ನಿರ್ಧಾರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

  Share This
  300x250 AD
  300x250 AD
  300x250 AD
  Leaderboard Ad
  Back to top