ಶಿವಮೊಗ್ಗಾ: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಮಾಜಿ ಸಚಿವ, ಶಿವಮೊಗ್ಗ ಕ್ಷೇತ್ರದ ಶಾಸಕ ಕೆ.ಎಸ್ ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.ಈ ಸಂಬಂಧ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಪತ್ರ ಬರೆದಿರುವ ಅವರು, ನಾನು ಸ್ವ-ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ.
ಹಾಗಾಗಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದು ಎಂದು ಮನವಿ ಮಾಡಿದ್ದಾರೆ.
ಕಳೆದ 40ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯದ ಉಪ-ಮುಖ್ಯಮಂತ್ರಿಯವರೆಗೆ ಗೌರವ ಸ್ಥಾನಮಾನಗಳನ್ನು ನೀಡಿದ ಪಕ್ಷದ ಹಿರಿಯರಿಗೆ ಧನ್ಯವಾದಗಳು ಎಂದು ಪತ್ರದಲ್ಲಿ ತಿಳಿಸಿದ್ದಾರೆ.