ಕಾರವಾರ: ಕರ್ನಾಟಕ ಸಾರ್ವತ್ರಿಕ ವಿಧಾನಸಬಾ ಚುನಾವಣೆಯಲ್ಲಿ ಯಾವುದೇ ಗೊಂದಲಕ್ಕೆ ಒಳಗಾಗದೆ ಕಾನೂನು ಸುವ್ಯವಸ್ಥೆ ಕಾಪಾಡುವುದರ ಜೊತೆಗೆ ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಸೆಕ್ಟರ್ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ/ ಜಿಲ್ಲಾ ಚುನಾವಣಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಸೂಚಿಸಿದರು.
ನಗರದ ಜಿಲ್ಲಾ ರಂಗಮOದಿರದಲ್ಲಿ ಆಯೋಜಿಸಲಾಗಿದ್ದ ಸೆಕ್ಟರ್ ಅಧಿಕಾರಿಗಳ ತರಬೇತಿ ಕಾರ್ಯಗಾರದಲ್ಲಿ ಮಾತನಾಡಿದ ಅವರು, ಚುನಾವಣಾ ಆಯೋಗವು ನೀಡಿರುವ ಮಾರ್ಗಸೂಚಿ ಮತ್ತು ನಿರ್ದೇಶಗಳ ಮಾಹಿತಿಯನ್ನು ಸೆಕ್ಟರ್ ಅಧಿಕಾರಿಗಳು ಹೊಂದಿರಬೇಕು ಹಾಗೂ ಯಾವುದೇ ಲೋಪದೋಷ ಕಂಡು ಬಂದಲ್ಲಿ ಗೊಂದಲಕ್ಕೆ ಒಳಗಾಗದೆ ಸಂಬ0ಧಪಟ್ಟ ಅಧಿಕಾರಿಗಳ ಹತ್ತಿರ ಮಾಹಿತಿ ಪಡೆದುಕೊಂಡು ಪರಿಹಾರ ಕಂಡುಕೊಳ್ಳಬೇಕು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಜೊತೆಗೆ ಚುನಾವಣಾ ಮಾರ್ಗಸೂಚಿಯಂತ ಕಾರ್ಯನಿರ್ವಹಿಸಬೇಕು ಎಂದರು.
ಬಳಿಕ ಉಪವಿಭಾಗಧಿಕಾರಿ ಜಯಲಕ್ಷ್ಮಿ ರಾಯಕೋಡ್ ಮಾತನಾಡಿ, ಸೆಕ್ಟರ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಚುನಾವಣಾ ಆಯೋಗವು ನೀಡಿದ ಮಾರ್ಗಸೂಚಿಯನ್ನು ಅರಿತುಕೊಂಡು ಕಾರ್ಯ ನಿರ್ವಹಿಸಬೇಕು. ಚುನಾವಣೆಗೆ ಸಂಬ0ಧಿಸಿದ್ದ0ತೆ ಯಾವುದೇ ರೀತಿಯ ಗೊಂದಲವಿದಲ್ಲಿ ಈ ಕಾರ್ಯಗಾರದಲ್ಲಿ ಮಾಹಿತಿ ಪಡೆದುಕೊಂಡು ಪರಿಹಾರ ಕಂಡುಕೊಳುವ0ತೆ ಅಧಿಕಾರಿಗಳಿಗೆ ಸೂಚಿಸಿದರು.
ಬಳಿಕ ಡಾ.ಶಶಿ ಶೇಖರ್. ರೆಡ್ಡಿ ರವರು ಸೆಕ್ಟರ್ ಅಧಿಕಾರಿಗಳ ತರಬೇತಿ ಕಾರ್ಯಗಾರದ ಕುರಿತು ವಿಶೇಷ ಉಪನ್ಯಾಸ ನೀಡಿದರು. ಕಾರ್ಯಾಗಾರದಲ್ಲಿ ಪ್ರೊಬಿಷನರಿ ಐಎಸ್ಐ ಅಧಿಕಾರಿ. ಜುಬೀನ್ ಮಹಾಪಾತ್ರ, ಜಿಲ್ಲಾ ಮಟ್ಟದ ಮತ್ತು ತಾಲೂಕ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.