• Slide
    Slide
    Slide
    previous arrow
    next arrow
  • ರಿಕ್ಷಾ ಡಿಕ್ಕಿ: ನಾಲ್ಕು ತಿಂಗಳ ಗರ್ಭಿಣಿ ಸ್ಥಳದಲ್ಲೇ ಸಾವು

    300x250 AD

    ಅಂಕೋಲಾ: ರಸ್ತೆಯ ಬದಿಯ ಕಚ್ಚಾ ಮಾರ್ಗದಲ್ಲಿ ನಡೆದುಕೊಂಡು ಹೋಗುತ್ತಿದ್ದ ಗರ್ಭಿಣಿಯೊಬ್ಬರಿಗೆ ರಿಕ್ಷಾ ಬಡಿದು ಆಕೆ ಸ್ಥಳದಲ್ಲೇ ಮೃತಪಟ್ಟ ಘಟನೆ ಭಾವಿಕೇರಿಯಲ್ಲಿ ನಡೆದಿದೆ. ಶೋಭಾ ಗೋಪಾಲ ನಾಯಕ (28) ಮೃತ ಮಹಿಳೆ,

    ಸುಮಾರು ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಇವರು ತನ್ನ ಮನೆ ಮುಂದಿನ ಡಾಂಬರು ರಸ್ತೆ ಪಕ್ಕದ ಮಣ್ಣಿನ ರಸ್ತೆಯಲ್ಲಿ ತನ್ನ ಗಂಡನೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ಅತಿವೇಗ ಮತ್ತು ಅಜಾಗರೂಕತೆಯಿಂದ ಬಂದ ರಿಕ್ಷಾ ಚಾಲಕ ನಿಯಂತ್ರಣ ತಪ್ಪಿ ಮಹಿಳೆಗೆ ಡಿಕ್ಕಿ ಹೊಡೆಸಿದ್ದಾನೆ.

    300x250 AD

    ಅಪಘಾತದ ರಭಸಕ್ಕೆ ಗರ್ಭಿಣಿ ಮಹಿಳೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಪಟ್ಟಣದ ಲಕ್ಷೇಶ್ವರ – ಕುಂಬಾರಕೇರಿ ವ್ಯಾಪ್ತಿಯ ರಿಕ್ಷಾ ಚಾಲಕ ಇವನಾಗಿದ್ದು, ಘಟನೆ ಬಳಿಕ ರಿಕ್ಷಾ ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.

    Share This
    300x250 AD
    300x250 AD
    300x250 AD
    Leaderboard Ad
    Back to top