• Slide
    Slide
    Slide
    previous arrow
    next arrow
  • ಸಮಸ್ಯೆಗಳನ್ನು ಜೀವಂತವಾಗಿರಿಸುವುದು ರಾಜಕಾರಣವಲ್ಲ: ಎಚ್‌ಡಿಕೆ

    300x250 AD

    ದಾಂಡೇಲಿ: ಸಮಸ್ಯೆಗಳನ್ನು ಜೀವಂತವಾಗಿರಿಸುವುದು ರಾಜಕಾರಣವಲ್ಲ. ಸಮಸ್ಯೆಗಳನ್ನ ಪರಿಹರಿಸುವುದೆ ನಿಜವಾದ ರಾಜಕಾರಣ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದರು.
    ನಗರದ ಹಳೆ ನಗರಸಭೆ ಮೈದಾನದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಹಳಿಯಾಳ- ದಾಂಡೇಲಿ- ಜೊಯಿಡಾ ವಿಧಾನಸಭಾ ಕ್ಷೇತ್ರದ ಬಗ್ಗೆ ನನಗೆ ವಿಶೇಷವಾದ ಕಾಳಜಿ ಇದೆ. ಈ ಕ್ಷೇತ್ರದಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಈ ಬಾರಿ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಈ ಕ್ಷೇತ್ರದ ಸಮಸ್ಯೆಗಳನ್ನ ಪರಿಹರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮವನ್ನು ಕೈಗೊಳ್ಳುತ್ತೇನೆ. ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಇಲ್ಲಿ ಘೋಟ್ನೇಕರ್ ಅವರನ್ನು ಅತ್ಯಧಿಕ ಮತಗಳ ಅಂತರದಿ0ದ ಗೆಲ್ಲಿಸುವಂತೆ ಮನವಿ ಮಾಡಿಕೊಂಡರು.
    ಜೆಡಿಎಸ್ ಅಭ್ಯರ್ಥಿ ಎಸ್.ಎಲ್.ಘೋಟ್ನೆಕರ್ ಮಾತನಾಡಿ, ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಬೇಕು ಕ್ಷೇತ್ರದಲ್ಲಿ ಪಕ್ಷ ಗೆಲ್ಲಬೇಕು. ಈ ನಿಟ್ಟಿನಲ್ಲಿ ಈ ಬಾರಿ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷಕ್ಕೆ ಅತ್ಯಧಿಕ ಮತಗಳನ್ನು ನೀಡಿ ಹರಸಿ ಆಶೀರ್ವದಿಸಬೇಕೆಂದು ಮನವಿಯನ್ನು ಮಾಡಿದರು.
    ಕಾರ್ಯಕ್ರಮದಲ್ಲಿ ವಿವಿಧ ಪಕ್ಷಗಳ ಮುಖಂಡರು ಕಾರ್ಯಕರ್ತರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ವೇದಿಕೆಯಲ್ಲಿ ಪಕ್ಷದ ರಾಜ್ಯ ಮುಖಂಡರು, ಜಿಲ್ಲಾ ಮುಖಂಡರು ಮತ್ತು ಸ್ಥಳೀಯ ಘಟಕದ ಮುಖಂಡರುಗಳು ಉಪಸ್ಥಿತರಿದ್ದರು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top