Slide
Slide
Slide
previous arrow
next arrow

ಕಾಗೋಡು ತಿಮ್ಮಪ್ಪ ಪುತ್ರಿ ಬಿಜೆಪಿ ಸೇರ್ಪಡೆ

300x250 AD

ಶಿರಸಿ: ಮಾಜಿ ಸಚಿವ ಕಾಂಗ್ರೆಸ್ ನಾಯಕ ಕಾಗೋಡ ತಿಮ್ಮಪ್ಪ ಅವರ ಪುತ್ರಿ ಜಿಲ್ಲೆಯ ಶಿರಸಿ ಕ್ಷೇತ್ರದ ಕೆಪಿಸಿಸಿ ಉಸ್ತುವಾರಿಯಾಗಿದ್ದ ಡಾ.ರಾಜನಂದಿನಿ ಕಾಂಗ್ರೆಸ್ ಪಕ್ಷ ತೊರದು ಬಿಜೆಪಿ ಸೇರಿದ್ದಾರೆ. ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಮ್ಮುಖದಲ್ಲಿ ಡಾ.ರಾಜನಂದಿನಿ ಅವರು ಬಿಜೆಪಿ ಸದಸ್ಯತ್ವ ಪಡೆದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿದ್ದ ರಾಜನಂದಿನಿ ಅವರನ್ನ ಶಿರಸಿ ಕ್ಷೇತ್ರದ ಕೆಪಿಸಿಸಿ ಉಸ್ತುವಾರಿಯಾಗಿ ಈ ಹಿಂದೆ ನೇಮಕ ಮಾಡಲಾಗಿತ್ತು. ಮಾಜಿ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ ಹಾಗೂ ರಾಜನಂದಿನಿ ಅವರನ್ನ ಉಸ್ತುವಾರಿಯಾಗಿ ನೇಮಕ ಮಾಡಲಾಗಿತ್ತು.
ಅಲ್ಲದೆ ರಾಜನಂದಿನಿ ಸಾಗರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಈ ಬಾರಿ ಕಾಂಗ್ರೆಸ್ ಪಕ್ಷ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರಿಗೆ ಟಿಕೆಟ್ ನೀಡಿದೆ. ಇದರಿಂದ ಬೇಸರಗೊಂಡಿರುವ ಡಾ.ರಾಜನಂದಿನಿ ಅವರು ಬಿಜೆಪಿ ಸೇರ್ಪಡೆಯಾಗಿದ್ದಾರೆ.


ಕಾಗೋಡು ತಿಮ್ಮಪ್ಪ ಅಸಮಾಧಾನ
ಪುತ್ರಿ ಡಾ.ರಾಜನಂದಿನಿ ಬಿಜೆಪಿ ಸೇರ್ಪಡೆಯಾಗಿರುವುದಕ್ಕೆ ಕಾಂಗ್ರೆಸ್ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಡಾ.ರಾಜನಂದಿನಿ ಬಿಜೆಪಿ ಸೇರ್ಪಡೆ ಆಗಿರುವ ಸುದ್ದಿ ನನಗೆ ಈಗಷ್ಟೇ ಗೊತ್ತಾಗಿದೆ. ಅವಳು ಈ ರೀತಿ ಮಾಡುತ್ತಾಳೆ ಎಂದು ನಾನು ಕನಸಿನಲ್ಲೂ ಆಲೋಚಿಸಿರಲಿಲ್ಲ. ನಾನು ರಾಜಕಾರಣದಲ್ಲಿ ಸ್ಥಿರತೆ ಮತ್ತು ಬದ್ಧತೆ ಉಳಿಸಿಕೊಂಡು ಬಂದವನು. ನಾವು ಅದನ್ನು ಅನುಸರಿಸುತ್ತಿದ್ದೇವೆ ಕಾರ್ಯರೂಪಕ್ಕೆ ತರುತ್ತಿದ್ದೇವೆ. ಆ ಸಂತೋಷ ಮತ್ತು ನೆಮ್ಮದಿ ನನಗಿದೆ ಎಂದರು. ಈ ಸಂದರ್ಭದಲ್ಲಿ ಬಿಜೆಪಿ ಸೇರಿರುವಂತಹದ್ದು ನನ್ನ ಎದೆಗೆ ಚೂರಿ ಹಾಕಿದಂತಾಗಿದೆ ಎಂದಿದ್ದಾರೆ.
ಡಾ.ರಾಜನಂದಿನಿ ಈ ಕೆಲಸ ಮಾಡಬಾರದಿತ್ತು. ಇದು ನನ್ನ ದೌರ್ಭಾಗ್ಯ ಎಂದು ಬೇಸರ ವ್ಯಕ್ತಪಡಿಸಿದರು. ಅದೇನಿದ್ದರೂ ನಾನು ಕಾಂಗ್ರೆಸ್ ಬಿಟ್ಟು ಹೋಗಲ್ಲ. ನಾನು ಕಾಂಗ್ರೆಸ್ ಪರವಾಗಿ ನಿಲ್ಲುತ್ತೇನೆ. ಕಾಂಗ್ರೆಸ್ ಪರವಾಗಿಯೇ ಇರುತ್ತೇನೆ ಎಂದಿದ್ದಾರೆ.
ಡಾ.ರಾಜನಂದಿನಿ ಬಿಜೆಪಿ ಸೇರ್ಪಡೆ ಹಿಂದೆ ಹಾಲಪ್ಪನವರ ಕೈವಾಡ ಇದೆ ಎಂದು ಆರೋಪಿಸಿದ ಅವರು, ಮಗಳನ್ನು ಸಂಪರ್ಕಿಸುವ ಪ್ರಯತ್ನ ಮಾಡುತ್ತೇನೆ. ಅವಳ ಮನವೊಲಿಸುವ ಪ್ರಯತ್ನ ಮಾಡುತ್ತೇನೆ. ಅವಳು ತನ್ನ ಬೇಸರವನ್ನು ನನ್ನ ಬಳಿ ಹೇಳಿಕೊಂಡಿಲ್ಲ ಎಂದರು. ನಾನು ಅವಳನ್ನು ಮಲ್ಲಿಕಾರ್ಜುನ ಖರ್ಗೆ ಬಳಿ ಕರೆದುಕೊಂಡು ಹೋಗಿದ್ದೆ. ಅವಕಾಶ ಇದ್ದರೆ ನೋಡೋಣ ಅಂದಿದ್ದರು. ರಾಜಕೀಯವಾಗಿ ಬೆಳೆಯುವಂಥದ್ದನ್ನು ಕಾಂಗ್ರೆಸ್ ನಲ್ಲೇ ಇದ್ದು ಮಾಡಬಹುದಿತ್ತು. ನನ್ನ ಹತ್ತಿರ ಅವಳು ಏನನ್ನೂ ಹೇಳಿರಲಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.

300x250 AD
Share This
300x250 AD
300x250 AD
300x250 AD
Back to top