ಬೆಂಗಳೂರು : ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ವಿಧಾನಸೌಧದ ಕಾರ್ಯಾಲಯದಲ್ಲಿ ಭೇಟಿಯಾದರು.
ಈ ಸಂದರ್ಭದಲ್ಲಿ ಸಚಿವರು ಮುಖ್ಯಮಂತ್ರಿಗಳೊಂದಿಗೆ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳ ಪುನರ್ ನಿರ್ಮಾಣದ ಬಗ್ಗೆ ವಿಸ್ತೃತವಾಗಿ ಚರ್ಚಿಸಿ ಹೆಚ್ಚಿನ ಅನುದಾನವನ್ನು ಶೀಘ್ರದಲ್ಲೇ ಮಂಜೂರಿ ಮಾಡುವಂತೆ ಮನವಿ ಮಾಡಿದ್ದಾರೆ. ಹಾಗೂ ಉತ್ತರಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗುವ ಹಲವಾರು ಯೋಜನೆಗಳ ಬಗ್ಗೆ ಚರ್ಚಿಸಿದರು, ಮಾನ್ಯ ಮುಖ್ಯಮಂತ್ರಿಗಳು ಸಚಿವರ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು ಈ ಕುರಿತು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.