ದಾಂಡೇಲಿ: ನಗರದಲ್ಲಿರುವ ತಹಶೀಲ್ದಾರ್ ಕರ‍್ಯಾಲಯದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ಜಯಂತಿ ಕಾರ್ಯಕ್ರಮವನ್ನು ಶುಕ್ರವಾರ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದ ಆರಂಭದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಗೌರವ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ತಹಶೀಲ್ದಾರ್ ಅಶೋಕ್ ಶಿಗ್ಗಾವಿಯವರು ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನ ನಮ್ಮ ದೇಶದ ಪರಮಗ್ರಂಥವಾಗಿದೆ. ಸರ್ವಸಮಾನತೆ, ಭಾತೃತ್ವದ ಸಮಾಜ ನಿರ್ಮಾಣದ ಆಶಯವನ್ನು ಹೊತ್ತು ಸಮಾನತೆಯ ತತ್ವವನ್ನು ಜಗತ್ತಿಗೆ ಸಾರಿದ ಡಾ.ಬಿ.ಆರ್.ಅಂಬೇಡ್ಕರ್ ಅವರ ತತ್ವಾದರ್ಶಗಳನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಉಪ ತಹಶೀಲ್ದಾರ್ ರಾಘವೇಂದ್ರ ಪೂಜೇರಿ, ತಹಶೀಲ್ದಾರ್ ಕಚೇರಿಯ ಗೌಡಪ್ಪ ಬನಕದಿನ್ನಿ, ರವಿ ಕಮ್ಮಾರ್ ಹಾಗೂ ತಹಶೀಲ್ದಾರ್ ಕಚೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.