• Slide
    Slide
    Slide
    previous arrow
    next arrow
  • ಅಂಬೇಡ್ಕರ್, ಜಗಜೀವನರಾಮ್ ಜಯಂತಿ ಆಚರಣೆ

    300x250 AD

    ದಾಂಡೇಲಿ: ತಾಲ್ಲೂಕಾಡಳಿತ ಮತ್ತು ನಗರಾಡಳಿತದ ಸಂಯುಕ್ತಾಶ್ರಯದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನರಾಮ್ ಅವರ ಜಯಂತಿ ಕಾರ್ಯಕ್ರಮವನ್ನು ಶುಕ್ರವಾರ ನಗರಸಭೆಯ ಸಭಾಭವನದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನರಾಮ್ ಅವರ ಭಾವಚಿತ್ರಕ್ಕೆ ಆರತಿ ಬೆಳಗಿ ಪೂಜೆ ಸಲ್ಲಿಸಿ, ಪುಷ್ಪಗೌರವ ಸಮರ್ಪಿಸುವ ಮೂಲಕ ಆಚರಿಸಲಾಯಿತು.

    ಈ ಸಂದರ್ಭದಲ್ಲಿ ಮಾತನಾಡಿದ ತಹಶೀಲ್ದಾರ್ ಅಶೋಕ್ ಶಿಗ್ಗಾವಿ, ಪೌರಾಯುಕ್ತರಾದ ಆರ್.ಎಸ್.ಪವಾರ್ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಬಿ.ಎನ್.ವಾಸರೆಯವರು ಈ ದೇಶದ ಮಹಾನ್ ಗ್ರಂಥವಾದ ಸಂವಿಧಾನವನ್ನು ರಚಿಸಿದ ಡಾ.ಬಿ.ಆರ್.ಅಂಬೇಡ್ಕರ್ ಅವರೊಬ್ಬ ವಿಶ್ವಮಾನವ. ಸಮಾನತೆಯ ರಾಷ್ಟ್ರನಿರ್ಮಾಣದ ಆಶಯವನ್ನು ಹೊಂದಿದ ಮತ್ತು ಈ ದೇಶದ ಪ್ರತಿಯೊಬ್ಬರಿಗೂ ಬದುಕುವ ಹಕ್ಕನ್ನು ನೀಡಿದ ಸಂವಿಧಾನವನ್ನು ಸಮರ್ಪಿಸಿದ ಮಹಾನ್ ಚೇತನ ಎಂದರು.
    ಡಾ.ಬಿ.ಆರ್.ಅ0ಬೇಡ್ಕರ್ ಅವರ ಜೀವನಾದರ್ಶಗಳು ಮತ್ತು ತತ್ವಾದರ್ಶಗಳನ್ನು ನಾವು ನೀವೆಲ್ಲರೂ ಮೈಗೂಡಿಸಿಕೊಳ್ಳುವ ಮೂಲಕ ಸೌಹಾರ್ದತೆಯ ನಾಡು ಕಟ್ಟುವ ಕಾಯಕಯೋಗಿಗಳಾಗಬೇಕೆಂದು ಕರೆ ನೀಡಿ, ಹಸಿರು ಕ್ರಾಂತಿಯ ಜನಕರಾದ ಡಾ.ಬಾಬು ಜಗಜೀವನರಾಮ್ ಅವರು ಈ ದೇಶಕ್ಕೆ ನೀಡಿದ ಕೊಡುಗೆ ಸದಾ ಸ್ಮರಣೀಯ. ಈ ಇಬ್ಬರು ಮಹನೀಯರ ಜನ್ಮಜಯಂತಿ ಕಾರ್ಯಕ್ರಮವನ್ನು ಮಾಡುವ ಮೂಲಕ ಈ ಇಬ್ಬರು ಮಹನೀಯರ ಆಶಯಗಳನ್ನು ಈಡೇರಿಸುವ ನಿಟ್ಟಿನಲ್ಲಿ ನಾವು ನೀವೆಲ್ಲರೂ ನಮ್ಮನ್ನು ನಾವು ಪರಿಪೂರ್ಣ ಮನಸ್ಸಿನಿಂದ ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದರು.
    ವೇದಿಕೆಯಲ್ಲಿ ತಾಲೂಕು ಪಂಚಾಯ್ತು ಕಾರ್ಯನಿರ್ವಹಣಾಧಿಕಾರಿ ಪ್ರಕಾಶ ಹಾಲಮ್ಮನವರ, ನಗರ ಸಭೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಎಚ್.ವೆಂಕಟೇಶ್, ರೋಟರಿ ಶಾಲೆಯ ಶಿಕ್ಷಕರಾದ ಪುಂಡಲೀಕ್ ದಾಸರ್ ಮೊದಲಾದವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ನಗರದ ವಿವಿಧ ದಲಿತಪರ ಸಂಘಟನೆಯ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು, ನಗರ ಸಭೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು. ನಗರ ಸಭೆಯ ವ್ಯವಸ್ಥಾಪಕರಾದ ಪರಶುರಾಮ ಶಿಂಧೆಯವರು ಸ್ವಾಗತಿಸಿದ ಕಾರ್ಯಕ್ರಮಕ್ಕೆ ನಗರ ಸಭೆಯ ಅಧಿಕಾರಿಗಳಾದ ಬಾಳು ಗವಸ ವಂದಿಸಿದರು. ಸುರೇಶ್ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top